Wednesday, May 15, 2024
spot_imgspot_img
spot_imgspot_img

12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಶೀಘ್ರವೇ ಲಸಿಕೆ ಸಾಧ್ಯತೆ

- Advertisement -G L Acharya panikkar
- Advertisement -

ಕೊರೊನಾ ವೈರಸ್ ವಿರುದ್ಧ ದೇಶದಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ. 18 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಲಸಿಕೆ ಹಾಕಲಾಗುತ್ತಿದೆ. ದೇಶದಲ್ಲಿ ಮೂರನೇ ಅಲೆ ಭಯ ಶುರುವಾಗಿದೆ. ಕೋವಿಡ್ -19 ರ ಮೂರನೇ ಅಲೆ ಭಯದ ನಡುವೆ 12-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಯಾವಾಗ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮುಂದಿನ ತಿಂಗಳು 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಸಿಗುವ ಸಾಧ್ಯತೆಯಿದೆ.

ಕ್ಯಾಡಿಲಾ ಹೆಲ್ತ್ ಕೇರ್ ಮುಂದಿನ ತಿಂಗಳು ZyCoV-D ಲಸಿಕೆ ಅಭಿಯಾನ ಶುರುವಾಗಲಿದೆ. ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ, ಕಳೆದ ತಿಂಗಳು ಇದರ ತುರ್ತು ಬಳಕೆಗೆ ಅನುಮೋದನೆ ನೀಡಿತ್ತು. ವರದಿಯ ಪ್ರಕಾರ, ಝೈಡಸ್ ಕ್ಯಾಡಿಲಾ ಅಕ್ಟೋಬರ್ ನಿಂದ ಪ್ರತಿ ತಿಂಗಳು 1 ಕೋಟಿ ಡೋಸ್ ಲಸಿಕೆ ತಯಾರಿಸಲಾಗುವುದು. ಆದ್ರೆ ಈ ಬಗ್ಗೆ ಆರೋಗ್ಯ ಇಲಾಖೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಮತ್ತೊಂದೆಡೆ ಭಾರತ್ ಬಯೋಟೆಕ್ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕೂಡ ಮಕ್ಕಳ ಲಸಿಕೆ ಪ್ರಯೋಗ ನಡೆಸುತ್ತಿದೆ. ಭಾರತ್ ಬಯೋಟೆಕ್ ಕೋವ್ಯಾಕ್ಸಿನ್‌ನ ಮೂರನೇ ಹಂತದ ಪ್ರಯೋಗವನ್ನು ಪೂರ್ಣಗೊಳಿಸಿದೆ. ಮುಂದಿನ ವಾರ ಡೇಟಾವನ್ನು ಡಿಜಿಸಿಐಗೆ ಹಸ್ತಾಂತರಿಸಲಿದೆ. ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 2 ರಿಂದ 12 ವರ್ಷ ವಯಸ್ಸಿನ ಮಕ್ಕಳ ಮೇಲೆ ಕೊವಾವ್ಯಾಕ್ಸ್ ನ ಎರಡನೇ-ಮೂರನೇ ಹಂತದ ಪ್ರಯೋಗವನ್ನು ನಡೆಸುತ್ತಿದೆ.

driving
- Advertisement -

Related news

error: Content is protected !!