Saturday, June 28, 2025
spot_imgspot_img
spot_imgspot_img

ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಬೃಹತ್ ಸೇತುವೆ

- Advertisement -
- Advertisement -

12 ಕೋಟಿ ರೂ. ವೆಚ್ಚದಲ್ಲಿ ಬಿಹಾರದ ಅರಾರಿಯಾದಲ್ಲಿ ಬಕ್ರಾ ನದಿಗೆ ನಿರ್ಮಿಸಲಾಗಿದ್ದ ಸೇತುವೆಯು ಉದ್ಘಾಟನೆಗೂ ಮುನ್ನವೇ ಕುಸಿದು ಬಿದ್ದಿದೆ.

ಸೇತುವೆ ಕುಸಿದು ಬಿದ್ದಿರುವ ವೀಡಿಯೋವನ್ನು ಸಾರ್ವಜನಿಕರು ಸೆರೆಹಿಡಿದಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ಸೇತುವೆ ಒಂದು ಬದಿಗೆ ವಾಲಿರುವುದನ್ನು ತೋರಿಸುತ್ತದೆ. ಈ ವೇಳೆ ಸೇತುವೆಯ ಬಳಿ ನದಿಯ ದಡದಲ್ಲಿ ನಿಂತಿದ್ದ ಜನ ಈ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಕುಸಿದ ಸೇತುವೆಯ ಭಾಗವು ಕೆಲವೇ ಕ್ಷಣಗಳಲ್ಲಿ ಕೊಚ್ಚಿಕೊಂಡು ಹೋಯಿತು. ಈ ಘಟನೆಯಲ್ಲಿ ಸದ್ಯ ಯಾವುದೇ ಜೀವ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಸಿಕ್ತಿ ಶಾಸಕ ವಿಜಯ್ ಕುಮಾರ್ ಎಎನ್‌ಐಗೆ ಹೇಳಿಕೆ ನೀಡಿದ್ದು, ನಿರ್ಮಾಣ ಕಂಪನಿಯ ಮಾಲೀಕರ ನಿರ್ಲಕ್ಷ್ಯದಿಂದ ಸೇತುವೆ ಕುಸಿದಿದೆ. ಆಡಳಿತವು ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ. ಸೇತುವೆ ನಿರ್ಮಾಣಕ್ಕೆ ಕಡಿಮೆ ಬೆಲೆಯ ಸಾಮಗ್ರಿಗಳನ್ನು ಬಳಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

- Advertisement -

Related news

error: Content is protected !!