Sunday, June 14, 2026
spot_imgspot_img
spot_imgspot_img

ವಿದ್ಯುತ್ ಪ್ರವಹಿಸಿ 12 ವರ್ಷದ ಬಾಲಕಿ ಸಾವು

- Advertisement -
- Advertisement -

ವಿದ್ಯುತ್ ಪ್ರವಹಿಸಿ 12 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಚಾಮರಾಜ ನಗರದ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಡಹಳ್ಳಿ ಗ್ರಾಮದ ವಿದ್ಯಾ(12) ಮೃತ ದುರ್ದೈವಿ. ಮನೆಯಲ್ಲಿದ್ದ ನೀರಿನ ಪಂಪ್ ಸ್ವಿಚ್ ಆಫ್ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಪ್ರವಹಿಸಿದೆ ಎಂದು ತಿಳಿದುಬಂದಿದೆ. ಒದ್ದೆ ಬಟ್ಟೆ ಧರಿಸಿದ್ದರಿಂದ ವಿದ್ಯುತ್ ಶಾಕ್ ನ ಪರಿಣಾಮ ಹೆಚ್ಚು ಬೀರಿದೆ. ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಿತಾದರೂ ಅದಾಗಲೇ ಮಗು ಮೃತಪಟ್ಟಿತ್ತು.

ಬಾಲಕಿ ತಂದೆ ಚಾಮರಾಜನಗರ ತಾಲೂಕಿನ ಕುಮಚಳ್ಳಿ ಆಗಿದ್ದು ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದ ತಾತನ ಮನೆಗೆ ಬಾಲಕಿಯನ್ನು ಕರೆತರಲಾಗಿತ್ತು. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!