Sunday, May 5, 2024
spot_imgspot_img
spot_imgspot_img

12 ವರ್ಷದ ಬಾಲಕಿ ಮೇಲೆ ಮಲತಂದೆಯಿಂದ ಹಲವು ಬಾರಿ ಅತ್ಯಾಚಾರ; ಆರೋಪಿ ಅರೆಸ್ಟ್‌..!!

- Advertisement -G L Acharya panikkar
- Advertisement -

ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯಲ್ಲಿ ಮೇ 16 ರಂದು 45 ವರ್ಷದ ವ್ಯಕ್ತಿಯೊಬ್ಬ ತನ್ನ 12 ವರ್ಷದ ಮಲ ಮಗಳ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ. ಸಂಭಾಲ್‌ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಾಲಕಿಯ ವೈದ್ಯಕೀಯ-ಕಾನೂನು ಪರೀಕ್ಷೆಯು ಲೈಂಗಿಕ ದೌರ್ಜನ್ಯದ ಸಾಧ್ಯತೆಯನ್ನು ದೃಢಪಡಿಸಿದೆ ಎಂದು ವರದಿಯಾಗಿದೆ. ಅಲ್ಲದೆ, ಪ್ರಾಥಮಿಕ ತನಿಖೆಯ ನಂತರ ಆರೋಪ ನಿಜವೆಂದು ತಿಳಿದು ಬಂದಿದೆ ಎಂದೂ ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ತಾಯಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ.

ಸುಮಾರು ಐದು ವರ್ಷಗಳ ಹಿಂದೆ ಬಾಲಕಿಯ ತಂದೆ ಮೃತಪಟ್ಟಿದ್ದು, ಆಕೆಯ ತಾಯಿ ಆರೋಪಿಯನ್ನು ಮದುವೆಯಾಗಿದ್ದಾಳೆ. ಇನ್ನು, ಮದುವೆಯ ನಂತರವೂ ಮಹಿಳೆ ತನ್ನ ಮೊದಲ ಗಂಡನ ಮನೆಯಲ್ಲಿ ವಾಸಿಸುತ್ತಿದ್ದಳು. ಬಳಿಕ ಆರೋಪಿಯೂ ಅಲ್ಲಿಗೆ ಸ್ಥಳಾಂತರಗೊಂಡಿದ್ದ ಎಂದೂ ತಿಳಿದುಬಂದಿತ್ತು. ಮೇ 16ರಂದು ಬಾಲಕಿಯ ತಾಯಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ವೇಳೆ ಆರೋಪಿ ಮಲ ಮಗಳ ಮೇಲೆ ಅತ್ಯಾಚಾರ ಎಸಗಿದ್ದರು. ಮಹಿಳೆ ಹಿಂತಿರುಗಿದಾಗ, ಅಪ್ರಾಪ್ತ ಬಾಲಕಿ ತನಗಾದ ಕಷ್ಟವನ್ನು ವಿವರಿಸಿದಳು. ನಂತರ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾಳೆ.

ಆದರೆ, ಈ ಕೃತ್ಯ ಎಸಗಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಬಳಿಕ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ. ವರದಿಯ ಪ್ರಕಾರ, ಆತ ಈ ಹಿಂದೆಯೂ ಹಲವಾರು ಬಾರಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು, ಈ ಪ್ರಕರಣದ ವಿವರವಾದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

- Advertisement -

Related news

error: Content is protected !!