Monday, July 20, 2026
spot_imgspot_img
spot_imgspot_img

ಮೇ 4: ಬೆಳ್ಳಿಪ್ಪಾಡಿಯಲ್ಲಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ದಿನ ಜಾತ್ರಾಮಹೋತ್ಸವ

- Advertisement -
- Advertisement -

ಪುತ್ತೂರು: ತಾಲೂಕಿನ ಬೆಳ್ಳಿಪ್ಪಾಡಿಯ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರಾಮಹೋತ್ಸವವು ಮೇ 4, 2026ರ ಸೋಮವಾರ ನಡೆಯಲಿದೆ.

ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ. ಈ ಪ್ರಯುಕ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಅನುಗ್ರಹಕ್ಕೆ ಪಾತ್ರರಾಗುವಂತೆ ದೇವಸ್ಥಾನ ಆಡಳಿತ ಮಂಡಳಿ ವಿನಂತಿಸಿದೆ.

ಕಾರ್ಯಕ್ರಮಗಳ ವಿವರ:

ಮೇ 3ರಂದು ರವಿವಾರ ಸಂಜೆ 4 ಗಂಟೆಗೆ ಬೆಳ್ಳಿಪ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಿಂದ ಹೊರೆಕಾಣಿಕೆ ಹೊರಡಲಿದೆ.

ಮೇ 4ರಂದು ಸೋಮವಾರ ಬೆಳಿಗ್ಗೆ 8.30ರಿಂದ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ ಹಾಗೂ ದೈವಗಳಿಗೆ ತಂಬಿಲ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.ಸಂಜೆ 5ರಿಂದ 6 ಗಂಟೆಯವರೆಗೆ ಅಂಬೆಲದ ರಾಜಶ್ರೀ ಭಜನಾ ಮಂಡಳಿ ಹಾಗೂ ನೆಕ್ಕಿಲಾಡಿ ಭಜನಾ ತಂಡದಿಂದ ಕುಣಿತ ಭಜನಾ ಸೇವೆ ನಡೆಯಲಿದೆ. ನಂತರ ಸಂಜೆ 6 ಗಂಟೆಗೆ ದೀಪಾರಾಧನೆ ಮತ್ತು ತ್ರಾಯಂಬಕ ಕಾರ್ಯಕ್ರಮ ಜರುಗಲಿದೆ.

ರಾತ್ರಿ 7 ಗಂಟೆಗೆ ಮಹಾಪೂಜೆ, ದೇವರ ಬಲಿ, ಭೂತಬಲಿ ಮಹೋತ್ಸವ, ವಸಂತಕಟ್ಟೆ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿದ್ದು, ಭಕ್ತರಿಗೆ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿದೆ.ಅನ್ನದಾನ ಸೇವಾಕರ್ತರಿಗೆ ಪ್ರತ್ಯೇಕ ಪ್ರಸಾದ ವ್ಯವಸ್ಥೆಯೂ ಇದೆ ಎಂದು ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!