Friday, July 24, 2026
spot_imgspot_img
spot_imgspot_img

6,086 ಪಿಯುಸಿ ಅತಿಥಿ ಉಪನ್ಯಾಸಕರ ಹುದ್ದೆ ಭರ್ತಿಗೆ ಅನುಮತಿ ನೀಡಿ ಆದೇಶ ಹೊರಡಿಸಿದ ಸರಕಾರ

- Advertisement -
- Advertisement -

ಬೆಂಗಳೂರು: 2026-27ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿ ರಾಜ್ಯದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ 6,086 ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರಕಾರವು ಅನುಮತಿ ನೀಡಿ, ಆದೇಶ ಹೊರಡಿಸಿದೆ.ಅತಿಥಿ ಉಪನ್ಯಾಸಕರಿಗೆ ಪ್ರತಿ ತಿಂಗಳು 14 ಸಾವಿರ ರೂ. ಮಾಸಿಕ ವೇತನವನ್ನು ನೀಡಲಾಗುತ್ತಿದೆ. ಪ್ರಸಕ್ತ ಬಜೆಟ್‌ನಲ್ಲಿ 85.20 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ನೇಮಿಸಿಕೊಳ್ಳಲಾಗುವ ಅತಿಥಿ ಉಪನ್ಯಾಸಕರಿಗೆ ತಗಲುವ ವೆಚ್ಚವನ್ನು ನಿಗದಿಪಡಿಸಿರುವ ಅನುದಾನದಿಂದ ಭರಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಪದ್ಮನಿ ಎಸ್‌.ಎನ್ ಆದೇಶದಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!