Wednesday, July 22, 2026
spot_imgspot_img
spot_imgspot_img

ಧರ್ಮಸ್ಥಳ ಪ್ರಕರಣ: ಎಸ್ಐಟಿಯಿಂದ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆ

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯ ಆರಂಭದಲ್ಲಿ ನ್ಯಾಯಾಲಯಕ್ಕೆ ತಂದಿದ್ದ ತಲೆಬುರುಡೆಯನ್ನು ಬಂಗ್ಲೆಗುಡ್ಡೆಯಲ್ಲಿ ತೆಗೆಯಲಾಗಿದ್ದು ಈ ಮಾನವನ ‘ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯಾಳ ಮಾವ ವಿಠಲ ಗೌಡ ಮತ್ತು ಬಂಟ್ವಾಳ ನಿವಾಸಿ ಪ್ರದೀಪ್ ಕುಲಾಲ್ ಎಂಬವರು ತಲೆ ಬರುಡೆ ತೆಗೆದ ಸ್ಥಳದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ ಘಟನೆಯ ಮರು ಸೃಷ್ಟಿಗಾಗಿ ಕಾರ್ಯಾಚರಣೆ ನಡೆಯಿತು. ಘಟನಾ ಸ್ಥಳವನ್ನು ಎಫ್ ಎಸ್ ಎಲ್ ಅಧಿಕಾರಿಗಳು ಖಚಿತಪಡಿಸಿ ಎಸ್ಐಟಿ ಗೆ ವರದಿ ನೀಡಲು ಬೆಂಗಳೂರಿನಿಂದ ಅಗಮಿಸಿದ ಎಫ್ಎಸ್ಎಲ್ ತಜ್ಞರು ಮತ್ತು ಸೋಕೋ ತಂಡದವರ ಜೊತೆ ಎಸ್ಐಟಿ ಅಧಿಕಾರಿಗಳು ಮೇ 21 ರಂದು ಅಪರಾಹ್ನ 2:40ಕ್ಕೆ ಪ್ರಕರಣದ ಸಾಕ್ಷಿಯಾಗಿರುವ ಪ್ರದೀಪ್ ಕುಲಾಲ್ ನನ್ನು ಕರೆದುಕೊಂಡು ಬಂದು ಸ್ಥಳ ಪರಿಶೀಲನೆ ನಡೆಸಿ ಮಹಜರು ಕಾರ್ಯ ಆರಂಭಿಸಿದ್ದಾರೆ.

ಆರಂಭದಲ್ಲಿ ನಡೆಸಲಾಗಿದ್ದ ಮಹಜರು ಸಮರ್ಪಕವಾಗಿ ನಡೆದಿಲ್ಲ ಎಂಬ ಕಾರಣಕ್ಕೆ ಇದೀಗ ಮತ್ತೆ ಮಹಜರು ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!