Friday, August 7, 2026
spot_imgspot_img
spot_imgspot_img

ವೇಶ್ಯಾವಾಟಿಕೆ ದಂಧೆ: ಇಬ್ಬರು ಮಹಿಳೆಯರು ಸಹಿತ ನಾಲ್ವರ ಬಂಧನ

- Advertisement -
- Advertisement -

ಬೆಂಗಳೂರು : ನಗರಾದ್ಯಂತ ಹಲವೆಡೆ ಬಾಡಿಗೆ ಮನೆಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.ಸೋಮವಾರ ಈ ಕುರಿತು ಪ್ರಕಟನೆ ಹೊರಡಿಸಿರುವ ಅವರು, ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟಿದ್ದ ನಾಲ್ವರು ಯುವತಿಯರನ್ನು ರಕ್ಷಿಸಲಾಗಿದೆ.

ಪದ್ಮನಾಭನಗರ, ಆರ್.ಕೆ.ಲೇಔಟ್, ಸುಂದರನಗರ ಮತ್ತು ಎನ್‌ಜಿಎಫ್ ಲೇಔಟ್‌ನಲ್ಲಿರುವ ಬಾಡಿಗೆ ಮನೆಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ ನಂತರ ಕೇಂದ್ರ ಅಪರಾಧ ವಿಭಾಗದ ಮಹಿಳಾ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ಹೇಳಿದ್ದಾರೆ.ಮಾಹಿತಿದಾರರು ನೀಡಿದ ಖಚಿತ ಮಾಹಿತಿಯ ಆಧಾರದ ಮೇಲೆ, ವಿವಿಧ ದಿನಾಂಕಗಳಲ್ಲಿ ಈ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಕಾರ್ಯಾಚರಣೆ ವೇಳೆ, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ರಕ್ಷಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಒಟ್ಟು ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಅವರಲ್ಲಿ ಇತರರನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್‌ ವಿವರಿಸಿದ್ದಾರೆ.ವಿಚಾರಣೆ ನಡೆಸಿದಾಗ, ಆರೋಪಿಗಳು ಹಣದ ಲಾಭಕ್ಕಾಗಿ ವೇಶ್ಯಾವಾಟಿಕೆ ಸೇವೆ ಬಯಸುವ ಪುರುಷರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಬಾಡಿಗೆ ಮನೆಗಳಿಗೆ ಭೇಟಿ ನೀಡಲು ವ್ಯವಸ್ಥೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ಸುಬ್ರಹ್ಮಣ್ಯಪುರ, ಜಾಲಹಳ್ಳಿ ಮತ್ತು ಜ್ಞಾನಭಾರತಿ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಸೀಮಂತ್ ಕುಮಾ‌ರ್ ಸಿಂಗ್‌ ತಿಳಿಸಿದ್ದಾರೆ.

- Advertisement -

Related news

error: Content is protected !!