- Advertisement -
- Advertisement -

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ.

ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಯುವತಿಯೊಬ್ಬಳ ಮೃತದೇಹ, ಆಕೆಯ ಆಡುಗೋಡಿ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಅತ್ಯಂತ ಕರುಣಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದೆ.ಪೂಜಾ ದತ್ತಾ ಜಾರ್ಖಂಡ್ ಮೂಲದವಳು. ಕಳೆದ ಎರಡೂವರೆ ವರ್ಷದಿಂದ ಆಡುಗೋಡಿಯಲ್ಲಿ ವಾಸವಿದ್ದಳು. ಈ ಹಿಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದಳು.

ಸದ್ಯ ಎಲ್ಲೂ ಕೆಲಸ ಮಾಡ್ತಿರಲಿಲ್ಲ ಅನ್ನೋದು ಗೊತ್ತಾಗಿದೆ. ಮನೆ ಪರಿಶೀಲನೆ ವೇಳೆ ಖಾಸಗಿ ಕಂಪನಿಯ ಐ.ಡಿ ಕಾರ್ಡ್ ಪತ್ತೆಯಾಗಿದೆ.ರೂಂನಲ್ಲಿ ಬೆತ್ತಲೆಯಾಗಿ ಪೂಜಾ ಮೃತದೇಹ ಬಿದ್ದಿದೆ.

ರೂಂ ತುಂಬಾ ಕೆಲ ಪೇಪರ್ಗಳು ಹರಿದಾಕಿರೋದು ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ದುರ್ವಾಸನೆಯಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -







