- Advertisement -
- Advertisement -
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ಸೋಮವಾರದಿಂದ ರಾಜ್ಯದ 358 ಕೇಂದ್ರಗಳಲ್ಲಿ ಆರಂಭವಾಗಳಿದ್ದು ಒಟ್ಟು 1,15,112 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.

2025-26ನೇ ಸಾಲಿನಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆ-1ಕ್ಕೆ ಹಾಜರಾಗಲು ಸಾಧ್ಯವಾಗದ 7,658 ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ಖಾಸಗಿ ವಿದ್ಯಾರ್ಥಿಗಳಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ.

ಫಲಿತಾಂಶ ಉತ್ತಮಪಡಿಸಿಕೊಳ್ಳಲು 11,881 ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆ-2 ಕ್ಕೆ 76,673 5, 38,439 ಬಾಲಕಿಯರು ಸೇರಿದಂತೆ ಒಟ್ಟು 1,15,112 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಸರ್ಕಾರಿ ಶಾಲೆಗಳ 55,403, ಅನುದಾನಿತ ಶಾಲೆಗಳ 31,436 ಮತ್ತು ಅನುದಾನರಹಿತ ಶಾಲೆಗಳ 28,273 ವಿದ್ಯಾರ್ಥಿಗಳು ಸೇರಿದ್ದಾರೆ.





- Advertisement -







