Friday, June 5, 2026
spot_imgspot_img
spot_imgspot_img

14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಅವಕಾಶ ಇದೆ: ಯು.ಟಿ ಖಾದರ್

- Advertisement -
- Advertisement -

ಮಂಗಳೂರು: ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್‌ ಹೇಳಿದ್ದಾರೆ.

ಅಕ್ರಮ ಗೋಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ಹಾಕುವ ಶಾಸಕ ಡಾ. ಭರತ್‌ ಶೆಟ್ಟಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಖಾದರ್‌, ಯಾರೂ ಕಾನೂನು ಮೀರಿ ಹೋಗಬಾರದು. ಬಕ್ರೀದ್ ಹಿನ್ನೆಲೆಯಲ್ಲಿ ಕುರ್ಬಾನಿಯಾಗಿ 14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಕಾನೂನಿನಲ್ಲಿ ಅವಕಾಶ ಇದೆ. ಹಾಗಾಗಿ ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಈ ಬಗ್ಗೆ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಯು.ಟಿ ಖಾದರ್ ಹೇಳಿದ್ದಾರೆ.

ಬಕ್ರೀದ್‌ ಹಬ್ಬಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

- Advertisement -

Related news

error: Content is protected !!