- Advertisement -
- Advertisement -
ಮಂಗಳೂರು:- ಆಗಸ್ಟ್ 5 ರಂದು ರಾಮ ಮಂದಿರದ ಭೂಮಿ ಪೂಜೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆಗಸ್ಟ್ 5 ರಂದು 144 ಸೆಕ್ಷನ್ ನಿಷೇಧಾಜ್ಞೆ ಆದೇಶ ಹೊರಡಿಸಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ವಿಕಾಶ್ ಕುಮಾರ್ .
ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜಾ ದಿನದಂದು ಸಂಭ್ರಮಾಚರಣೆ ಮಾಡಲು ಹಿಂದೂ ಸಂಘಟನೆಗಳು ಆಯೋಜಿಸಿದ್ದರು.ಇದಕ್ಕೆ ಪ್ರತಿಯಾಗಿ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆಗೂ ಸಿದ್ಧತೆ ಬಗ್ಗೆ ಮಾಹಿತಿ ಕೂಡ ಇದ್ದಿದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಕಮೀಷನೇಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಾಳೆ(ಬುಧವಾರ) ರಾತ್ರಿ.8ರಿಂದ ಗುರುವಾರ (ಅ.6)ರ ಬೆಳಿಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ. ಸಾರ್ವಜನಿಕ ರಲ್ಲಿ ನಿಷೇಧಾಜ್ಞೆ ಉಲ್ಲಂಘಿಸದಂತೆ ಖಡಕ್ ಆದೇಶ ನೀಡಿದ ಮಂಗಳೂರು ಕಮೀಷನರ್.
- Advertisement -