Monday, July 20, 2026
spot_imgspot_img
spot_imgspot_img

ವಿಟ್ಲ: ಹೆಲ್ಮೇಟ್ ಇಲ್ಲದೇ ಸ್ಕೂಟರ್ ಸವಾರಿ – ಮಾದಕವಸ್ತು ಸೇವನೆ ಆರೋಪದ ಮೇಲೆ ಯುವಕ ಬಂಧನ

- Advertisement -
- Advertisement -

ವಿಟ್ಲ: ವಾಹನ ತಪಾಸಣೆ ವೇಳೆ ಹೆಲ್ಮೇಟ್ ಧರಿಸದೇ ಸ್ಕೂಟರ್ ಚಾಲನೆ ಮಾಡುತ್ತಿದ್ದ ಯುವಕನು ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಮೇ 3ರಂದು ವಿಟ್ಲ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ನಡೆದಿದೆ.

ವಿಟ್ಲ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಬಿ.ಎಸ್. ನಾಯಕ್ ಅವರು ಸಿಬ್ಬಂದಿಗಳೊಂದಿಗೆ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ KA-19-HX-0497 ಸಂಖ್ಯೆಯ ಸ್ಕೂಟರ್‌ನಲ್ಲಿ ಹೆಲ್ಮೇಟ್ ಇಲ್ಲದೆ ಬರುತ್ತಿದ್ದ ಸವಾರನನ್ನು ತಡೆದು ನಿಲ್ಲಿಸಲಾಯಿತು. ಈ ವೇಳೆ ಆತನು ಪೊಲೀಸರೊಂದಿಗೆ ಅಸಭ್ಯವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ತಿಳಿದುಬಂದಿದೆ.ಆತನ ವರ್ತನೆ ಅನುಮಾನಾಸ್ಪದವಾಗಿದ್ದರಿಂದ ವಿಚಾರಣೆ ನಡೆಸಿದಾಗ, ಬಂಟ್ವಾಳ ತಾಲೂಕಿನ ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್ (26) ಎಂದು ತಿಳಿದುಬಂದಿದ್ದು, ಮಾದಕವಸ್ತು ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ನಂತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕವಸ್ತು ಸೇವನೆ ದೃಢಪಟ್ಟಿದೆ.ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.100/2026ರಂತೆ ಪ್ರಕರಣ ದಾಖಲಿಸಿಕೊಂಡು, ಎನ್‌ಡಿಪಿಎಸ್ ಕಾಯ್ದೆ 27(b), ಬಿಎನ್‌ಎಸ್ 221 ಹಾಗೂ ಕೆಎಂವಿ ನಿಯಮ 230(1) ಜೊತೆಗೆ ಐಎಂವಿ ಕಾಯ್ದೆ 177ರಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

- Advertisement -

Related news

error: Content is protected !!