- Advertisement -
- Advertisement -

ಮಂಗಳೂರು, ಮೇ 20: ಜಾಗತಿಕವಾಗಿ ಇಂಧನ ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದರೂ ಮುಂದಿನ ಒಂದು ತಿಂಗಳವರೆಗೆ ಬಸ್ ದರದಲ್ಲಿ ಏರಿಕೆ ಮಾಡದಿರಲು ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ತೀರ್ಮಾನಿಸಿದೆ ಎಂದು ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ತಿಳಿಸಿದ್ದಾರೆ.ಅವರು ಮಂಗಳವಾರ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಸಭೆಯ ಬಳಿಕ ತೆಗೆದುಕೊಂಡ ತೀರ್ಮಾನದ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದರು.





ಸದ್ಯದ ಪರಿಸ್ಥಿತಿಯಲ್ಲಿ ವಾಹನದ ಬಿಡಿಭಾಗ, ಪೆಟ್ರೋಲ್, ಡೀಸೆಲ್, ಇಂಜಿನ್ ಆಯಿಲ್ ಎಲ್ಲ ಹೆಚ್ಚಳವಾಗಿದೆ. ಬಸ್ ದರ ಏರಿಕೆ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಜನಸಾಮಾನ್ಯರ ಪರಿಸ್ಥಿತಿಯನ್ನು ಗಮನಿಸಿ ಮುಂದಿನ ಒಂದು ತಿಂಗಳು ಬಸ್ ದರ ಏರಿಕೆ ಮಾಡದೆ ಯಥಾ ಸ್ಥಿತಿಯಲ್ಲಿ ಮುಂದುವರಿಯುವ ಬಗ್ಗೆ ತೀರ್ಮಾನಿಸಲಾಯಿತು. ಬಳಿಕ ಪರಿಸ್ಥಿತಿಯನ್ನು ಗಮನಿಸಿ ಮುಂದಿನ ಸಭೆಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಬಗ್ಗೆ ನಿರ್ಣಯ ಮಾಡಲಾಯಿತು ಎಂದು ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ತಿಳಿಸಿದ್ದಾರೆ.

- Advertisement -








