Monday, June 15, 2026
spot_imgspot_img
spot_imgspot_img

1487 ಗ್ರಾಂ ಚಿನ್ನ ಕಳ್ಳ ಸಾಗಾಣಿಕೆ ಮಾಡಿ ಸಿಕ್ಕಿ ಬಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ!!

- Advertisement -
- Advertisement -

ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ ಚಿನ್ನ-ಕಳ್ಳ ಸಾಗಾಣಿಕೆ ಮಾಡಿ ಸಿಕ್ಕಿ ಬಿದ್ದಿದ್ದು, ಆರೋಪಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಿ 1487 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ತಿಳಿಸಿದೆ. ವಯನಾಡು ಮೂಲದ ಶಫಿ ಬಂಧಿತ ಆರೋಪಿ.

ಬಹ್ರೇನ್ ಕೋಯಿಕ್ಕೋಡ್ ಹಾಗೂ ಕೊಚ್ಚಿ ನಡುವಿನ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ಸಿಬ್ಬಂದಿ ಚಿನ್ನ ಸಾಗಾಣಿಕೆ ಮಾಡುತ್ತಿರುವ ಮಾಹಿತಿ ಅಧಿಕಾರಿಗಳಿಗೆ ಲಭಿಸಿದ್ದು, ಕೈಗಳಿಗೆ ಚಿನ್ನವನ್ನು ಸುತ್ತಿಕೊಂಡು, ಅಂಗಿಯ ತೋಳುಗಳಿಂದ ಮುಚ್ಚಿ ಗ್ರೀನ್ ಚಾನೆಲ್ ಮೂಲಕ ಆರೋಪಿ ಹಾದುಹೋಗುವ ಪ್ಲಾನ್ ಮಾಡಿದ್ದಾನೆ. ಈ ಮುನ್ನ ಸಿಂಗಾಪುರದಿಂದ ಚೆನ್ನೈಗೆ ಆಗಮಿಸಿದ್ದ ಇಬ್ಬರು ಪ್ರಯಾಣಿಕರಿಂದ 3.32 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡು ಬಂಧಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!