Tuesday, July 21, 2026
spot_imgspot_img
spot_imgspot_img

2023ರ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಆಗ್ರಹಿಸಿ ಮಂಗಳೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಮಂಗಳೂರು, ಎ. 22: ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ (ನಗರ) ವತಿಯಿಂದ ಬುಧವಾರ ಕಾಂಗ್ರೆಸ್ ಕಚೇರಿ ಎದುರು 2023ರ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.ಸಮಿತಿಯ ಅಧ್ಯಕ್ಷೆ ಅಪ್ಪಿ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಹಿಳಾ ಕಾರ್ಯಕರ್ತರು ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದರು.

ಕ್ಷೇತ್ರ ವಿಂಗಡನೆಯ ಮೂಲಕ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರಲು ಪ್ರಯತ್ನಿಸುವ ಮೂಲಕ ಕೇಂದ್ರ ಸರಕಾರ ಸಂವಿಧಾನ ವಿರೋಧಿ ಹಾಗೂ ಮಹಿಳಾ ವಿರೋಧಿ ನಡೆಯನ್ನು ಅನುಸರಿಸಿದೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮಹಿಳಾ ಮುಖಂಡರಾದ ಸ್ವರೂಪ ಶೆಟ್ಟಿ, ನೀತು ಡಿಸೋಜಾ, ಚಂದ್ರಕಲಾ ರಾವ್, ಸಬಿತಾ ಮಿಸ್ಕಿತ್, ವೀಣಾ, ಮೀನಾ ಟೆಲ್ಲಿಸ್, ಗೀತಾ ಪ್ರವೀಣ್, ಶಾಂತಲಾ ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!