Saturday, May 18, 2024
spot_imgspot_img
spot_imgspot_img

ಮಂಗಳೂರು: ಮೋಸ್ಟ್‌ ವಾಂಟೆಡ್ ಪಾರಿವಾಳ ಕಬೀರ್ ಅರೆಸ್ಟ್‌; 15ಕ್ಕೂ ಹೆಚ್ಚು ದನ ಕಳ್ಳತನ ಪ್ರಕರಣ

- Advertisement -G L Acharya panikkar
- Advertisement -

ಮಂಗಳೂರು: 15ಕ್ಕೂ ಹೆಚ್ಚು ದನ ಕಳ್ಳತನ ಪ್ರಕರಣಗಳಲ್ಲಿ ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಕಬೀರ್ @ ಪಾರಿವಾಳ ಕಬೀರ್ ಬಂಧಿತ ಆರೋಪಿಯಾಗಿದ್ದು ಈತನ ವಿರುದ್ಧ ವಾರಂಟ್ ಹೊರಡಿಸಲಾಗಿತ್ತು.

ಈತ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿಗೆ ತೆರಳಿದ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಬಗ್ಗೆಯೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರಿನ ಬೆಂಗ್ರೆ ಕಸಬಾ ನಿವಾಸಿ ಕುಖ್ಯಾತ ಆರೋಪಿ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆ ಹಾಗೂ ದ.ಕ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ದನಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.

ಜಾಮೀನು ಪಡೆದು ಹೊರ ಬಂದಿದ್ದ ಪಾರಿವಾಳ ಕಬೀರ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಸಿಸಿಬಿ ಪೊಲೀಸರು ಆತನನ್ನು ದಸ್ತಗಿರಿ ಮಾಡಲು ತೆರಳಿದ ಸಮಯ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ವಿರುದ್ಧ ಮಂಗಳೂರು ನಗರ ವ್ಯಾಪ್ತಿಯ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಕಂಕನಾಡಿ ನಗರ, ಉಳ್ಳಾಲ, ಪಣಂಬೂರು, ಬಜ್ಜೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ 15 ಹೆಚ್ಚು ದನ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ಏಳು ತಿಂಗಳಿನಿಂದ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.

- Advertisement -

Related news

error: Content is protected !!