Friday, October 9, 2026
spot_imgspot_img
spot_imgspot_img

ಅಕ್ರಮವಾಗಿ ಸಂಗ್ರಹಿಸಿದ್ದ 150 ನಾಡಬಾಂಬ್, ಬಂದೂಕು ವಶ – ವ್ಯಕ್ತಿಯ ಬಂಧನ

- Advertisement -
- Advertisement -

ಚಿಕ್ಕಬಳ್ಳಾಪುರ: ಜಿಲ್ಲೆಯ ​ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 150ಕ್ಕೂ ಹೆಚ್ಚು ನಾಡಬಾಂಬ್‌ಗಳು ಹಾಗೂ ನಾಡಬಂದೂಕೊಂದನ್ನು ಜಪ್ತಿ ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 35 ವರ್ಷದ ನರಸಿಂಹಪ್ಪ ಎಂಬ ವ್ಯಕ್ತಿಯನ್ನು ಬಟ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಬಟ್ಲಹಳ್ಳಿ ಪೊಲೀಸರು ದಾಳಿ ನಡೆಸಿದ್ದು, ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 150 ನಾಡಬಾಂಬ್‌ಗಳು ಹಾಗೂ ಒಂದು ನಾಡಬಂದೂಕನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯು ಬೃಹತ್ ಪ್ರಮಾಣದ ಸ್ಫೋಟಕಗಳು ಮತ್ತು ಬಂದೂಕನ್ನು ಯಾವುದಕ್ಕಾಗಿ ಸಂಗ್ರಹಿಸಿಟ್ಟಿದ್ದ ಎಂಬ ಕುರಿತು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!