Monday, September 7, 2026
spot_imgspot_img
spot_imgspot_img

EIR ಪೋರ್ಟಲ್ ಮೂಲಕ ಕಳೆದುಹೋದ 150 ಮೊಬೈಲ್‌ಗಳು ಪತ್ತೆ- – ವಾರಸುದಾರರಿಗೆ ಹಸ್ತಾಂತರ

- Advertisement -
- Advertisement -

ಮಂಗಳೂರು: ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್‌ ಫೋನ್‌ಗಳನ್ನು ಪತ್ತೆಹಚ್ಚಲು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮಾರ್ಚ್ 2026ರಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಅದರ ಫಲವಾಗಿ ಒಟ್ಟು 150 ಮೊಬೈಲ್‌ಗಳನ್ನು ಪತ್ತೆ ಮಾಡಿ ಸಂಬಂಧಿಸಿದ ಮಾಲೀಕರಿಗೆ ಹಸ್ತಾಂತರಿಸಲಾಗಿದೆ.

ಸಾರ್ವಜನಿಕರು ಕಳೆದುಕೊಂಡ ಮೊಬೈಲ್‌ಗಳ ಕುರಿತು CEIR (Central Equipment Identity Register) ಪೋರ್ಟಲ್‌ನಲ್ಲಿ ಸಲ್ಲಿಸಿದ ದೂರುಗಳನ್ನು ಆಧರಿಸಿ ಈ ಕಾರ್ಯಾಚರಣೆ ಕೈಗೊಳ್ಳಲಾಯಿತು. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಮನ್ವಯದಿಂದ ಕಾರ್ಯಾಚರಣೆ ನಡೆಸಿ, ಇತರ ಜಿಲ್ಲೆಗಳು ಹಾಗೂ ರಾಜ್ಯಗಳಲ್ಲಿ ಪತ್ತೆಯಾದ ಮೊಬೈಲ್‌ಗಳನ್ನೂ ವಾಪಸು ತರಲಾಗಿದೆ.
ಪತ್ತೆಯಾದ ಮೊಬೈಲ್‌ಗಳನ್ನು ಠಾಣಾ ಮಟ್ಟದಲ್ಲಿ ಪರಿಶೀಲಿಸಿ, ಮೂಲ ಮಾಲೀಕರಿಗೆ ಹಸ್ತಾಂತರಿಸುವ ಕಾರ್ಯ ಯಶಸ್ವಿಯಾಗಿ ನೆರವೇರಿಸಲಾಗಿದೆ. ಈ ರೀತಿಯ ವಿಶೇಷ ಕಾರ್ಯಾಚರಣೆ ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ಮುಂದುವರೆಯಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಸಾರ್ವಜನಿಕರು ತಮ್ಮ ಮೊಬೈಲ್‌ಗಳು ಕಳೆದುಹೋದರೆ ತಕ್ಷಣ CEIR ಪೋರ್ಟಲ್‌ನಲ್ಲಿ ದೂರು ದಾಖಲಿಸುವ ಮೂಲಕ ಈ ತಂತ್ರಜ್ಞಾನದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.

- Advertisement -

Related news

error: Content is protected !!