- Advertisement -
- Advertisement -

ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ದಾಖಲಾಗಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ. 09/2018ರಲ್ಲಿ ಐಪಿಸಿ ಕಲಂ 379 ಹಾಗೂ 201ರಡಿ ದಾಖಲಾಗಿದ್ದ ಪ್ರಕರಣದ ಆರೋಪಿ ಎಸ್.ಎನ್. ಕಿಶೋರ್ (32), ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಸರಗೂರು ನಿವಾಸಿಯಾಗಿದ್ದಾನೆ.
ಆರೋಪಿಯು ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಿನ್ನೆಲೆ, ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ವೃಷಭ ಹಾಗೂ ಕಾನ್ಸ್ಟೇಬಲ್ ಚರಣ್ ರಾಜ್ ಅವರು ಮೈಸೂರು ಜಿಲ್ಲೆಯ ಸರಗೂರಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಮೇ.8ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -








