Sunday, June 21, 2026
spot_imgspot_img
spot_imgspot_img

ಪುತ್ತೂರು: ಆನ್‌ಲೈನ್‌ ವಂಚನೆಗೆ ಒಳಗಾಗಿ ಬರೋಬರಿ 16.50 ಲಕ್ಷ ರೂ. ಕಳೆದುಕೊಂಡ ಪುತ್ತೂರಿನ ಪ್ರಸಿದ್ದ ವೈದ್ಯ

- Advertisement -
- Advertisement -

ಪುತ್ತೂರು: ಆನ್ ಲೈನ್ ವಂಚನೆಗೆ ಒಳಗಾಗಿ ಪುತ್ತೂರಿನ ಪ್ರಸಿದ್ದ ವೈದ್ಯರೊಬ್ಬರು 16.50 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಡೆದಿದ್ದು, ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಾ.ಚಿದಂಬರ ಅಡಿಗ (69) ವಂಚನೆಗೆ ಒಳಗಾದ ಪುತ್ತೂರಿನ ವೈದ್ಯ

ಡಾ ಅಡಿಗ ರವರಿಗೆ ದೂರವಾಣಿ ಮೂಲಕ 28-03-2024 ರಂದು ಬೆಳಿಗ್ಗೆ, ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿದ್ದು, ಕರೆ ಸ್ವೀಕರಿಸಿ ಮಾತನಾಡಿದಾಗ, ಕರೆ ಮಾಡಿದ ವ್ಯಕ್ತಿಯು ನಾನು ದೆಹಲಿಯಿಂದ ಪೊಲೀಸ್ ಮಾತನಾಡುತ್ತಿರುವುದಾಗಿ ತಿಳಿಸಿ, ನಿಮ್ಮ ಮೇಲೆ ದೆಹಲಿಯಲ್ಲಿ ಮಾದಕ ವಸ್ತುವಿಗೆ ಸಂಬಂದಿಸಿದಂತೆ ಹಾಗೂ ಅಕ್ರಮ ಹಣ ಹೊಂದಿರುವ ಬಗ್ಗೆ ಮತ್ತು ಮಾನವ ಕಳ್ಳ ಸಾಗಾಣಿಕ ಪ್ರಕರಣ ದಾಖಲಾಗಿ, ಅರೆಸ್ಟ್ ಮಾಡಲು ಕೋರ್ಟ್ ನಿಂದ ವಾರಂಟ್ ಎಂದು ಹೇಳಿದ್ದಾರೆ.

ನೀವು ದೆಹಲಿಯ ಸಿಬಿಐ ಕೋರ್ಟ್ ಗೆ ಹಾಜರಾಗಬೇಕು. ನಿಮಗೆ ಇಲ್ಲಿಗೆ ಬರಲು ಆಗದಿದ್ದರೆ ಈಗ ಆನ್ಲೈನ್‌ ಮೂ ಲಕ ಕೋರ್ಟ್ ನ ಕೇಸ್ ನಡೆಸುತ್ತೇವೆ. ನೀವು ನಿಮ್ಮ ಬ್ಯಾಂಕ್ ಅಕೌಂಟ್ ನಲ್ಲಿದ್ದ ಹಣವನ್ನು ನಾನು ಹೇಳುವ ಅಕೌಂಟ್ ನಂಬ್ರಕ್ಕೆ ವರ್ಗಾವಣೆ ಮಾಡಬೇಕು ನಿಮ್ಮ ಕೋರ್ಟ್ ಕೇಸ್ ಮುಗಿದ ಮೇಲೆ ನಿಮಗೆ ನಿಮ್ಮ ಹಣ ವಾಪಾಸು ಸಿಗುತ್ತದೆ ಇಲ್ಲದಿದ್ದರೆ ನಿಮ್ಮ ಮನೆಗೆ ಬಂದು ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ ಎಂಬುದಾಗಿ ತಿಳಿಸಿದ್ದಾರೆ.

ಅಲ್ಲದೇ ಡಾ. ಅಡಿಗ ರ ವಿರುದ್ದ ದೆಹಲಿಯಲ್ಲಿ ಪ್ರಕರಣ ದಾಖಲಾಗಿರುವಂತೆ ಬಿಂಬಿಸುವ ಕೆಲವೊಂದು ದಾಖಲೆಗಳನ್ನು ಅಡಿಗರ ಮೊಬೈಲ್ ಫೋನ್ ನ ವಾಟ್ಸ್ ಆಪ್ ಗೆ ಕಳುಹಿಸಿದ್ದು, ಅಪರಿಚಿತನ ಮಾತನ್ನು ನಂಬಿ, ಗಾಬರಿಗೊಂಡು, ಅಡಿಗರವರು ಬ್ಯಾಂಕ್ ಖಾತೆಯಿಂದ, RTGS ಮೂಲಕ ಸದರಿ ಅಪರಿಚಿತ ತಿಳಿಸಿದ ಬ್ಯಾಂಕ್ ಖಾತೆಗೆ ರೂ 16,50,000/- ಹಣವನ್ನು ವರ್ಗಾವಣೆ ಮಾಡಿರುತ್ತಾರೆ. ಸ್ವಲ್ಪ ಹೊತ್ತಿನ ಬಳಿಕ ಸದ್ರಿ ಅದೇ ವ್ಯಕ್ತಿಯು ಅಡಿಗರಿಗೆ ಕರೆಮಾಡಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಾಗ, ಅನುಮಾನ ಬಂದು ದೂರವಾಣಿ ಕರೆ ಕಡಿತಗೊಳಿಸಿದ್ದು, ತನ್ನ ಗೆಳೆಯರೊಂದಿಗೆ ಈ ಬಗ್ಗೆ ತಿಳಿಸಿದಾಗ ಸದರಿ ಆನ್ ಲೈನ್ ಮೋಸದ ಕೃತ್ಯದ ಬಗ್ಗೆ ತಿಳಿದುಬಂದಿರುತ್ತದೆ.

ಘಟನೆ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ, ಅ ಕ್ರ ನಂ :32-2024 ಕಲಂ:406,419, 420 ಐ ಪಿ ಸಿ ಮತ್ತು 66 ( C) ,66 ( D ) I T ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!