Monday, June 22, 2026
spot_imgspot_img
spot_imgspot_img

17 ವರ್ಷದ ಬಾಲಕಿಯನ್ನು ಮದುವೆಯಾಗಿ ವಂಚಿಸಿದ ಶಿಕ್ಷಕ ಅರೆಸ್ಟ್

- Advertisement -
- Advertisement -

17 ವರ್ಷದ ಬಾಲಕಿಯನ್ನು ಮದುವೆಯಾಗಿ ವಂಚಿಸಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗಂಗವರಂ ಮಂಡಲ್ ಪ್ರದೇಶದಲ್ಲಿ ನಡೆದಿದೆ.

ಖಾಸಗಿ ಕಾಲೇಜಿನಲ್ಲಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಲಪತಿ (33) ಬಂಧಿತ ಆರೋಪಿ. ಚಲಪತಿಗೆ ಈಗಾಗಲೇ ಮದುವೆಯಾಗಿದ್ದು, ಓರ್ವ ಮಗಳಿದ್ದಾಳೆ. ಆರೋಪಿಯು 12ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯನ್ನು ಪ್ರೀತಿಸಿದ್ದು, ಅದಾದ ಬಳಿಕ ಬಾಲಕಿಯ ಅಂತಿಮ ಪರೀಕ್ಷೆ ಮುಗಿದ ನಂತರ ಸುಳ್ಳು ಹೇಳಿ ತಿರುಪತಿಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಬಾಲಕಿಯ ಬಳಿ ತಾನು ಪ್ರಾಮಾಣಿಕ, ತನ್ನನ್ನು ನಂಬು, ನಿನ್ನನ್ನು ನಾನು ನೋಡಿಕೊಳ್ಳುತ್ತೇನೆ ಎಂದು ನಂಬಿಸಿ ಅವರಿಬ್ಬರು ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ.

ಮದುವೆಯಾದ ಬಳಿಕ ಚಲಪತಿ ವರ್ತನೆಯಲ್ಲಿ ಬದಲಾವಣೆಯನ್ನು ಕಂಡು ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಗಂಗವರಂ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!