Friday, July 11, 2025
spot_imgspot_img
spot_imgspot_img

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ 18 ರಿಂದ 45 ವರ್ಷದವರಿಗೆ ಉಚಿತ ವಾಕ್ಸಿನೇಷನ್

- Advertisement -
- Advertisement -

ಬೆಂಗಳೂರು: ಮೇ 1ರಿಂದ ಪ್ರಾರಂಭವಾಗಲಿರುವ ಮೂರನೇ ಹಂತದ ವ್ಯಾಕ್ಸಿನೇಷನ್​ನಲ್ಲಿ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ 18 ರಿಂದ 45 ವರ್ಷದವರೆಗಿನ ಜನರಿಗೆ ಉಚಿತ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ಕೊರೊನಾ ಹಿನ್ನೆಲೆ ಬಿಗಿ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಕರೆದಿದ್ದ ಕ್ಯಾಬಿನೆಟ್ ಮೀಟಿಂಗ್​ನಲ್ಲಿ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ.

ಇದೇ ವೇಳೆ ರಾಜ್ಯದಲ್ಲಿ ಉಚಿತ ವ್ಯಾಕ್ಸಿನೇಷನ್ ನೀಡಲು ಸರ್ಕಾರ ನಿರ್ಧರಿಸಿದೆ. ಕ್ಯಾಬಿನೆಟ್ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮತನಾಡಿದ ಸಿಎಂ ಯಡಿಯೂರಪ್ಪ ರವರು ಸರ್ಕಾರಿ ಆಸ್ಪತ್ರೆಗಳಲ್ಲಿ 18-45 ವಯಸ್ಸಿನ ಅಂತರದವರಿಗೆ ಉಚಿತ ವ್ಯಾಕ್ಸಿನ್ ನೀಡಲಾಗುವುದು ಎಂದು ಘೋಷಿಸಿದ್ದಾರೆ.

- Advertisement -

Related news

error: Content is protected !!