Tuesday, December 3, 2024
spot_imgspot_img
spot_imgspot_img

ಮಹಿಳಾ ಹಾಸ್ಟೆಲ್‌ನಲ್ಲಿ 18 ವರ್ಷದ ಯುವತಿಯ ಹತ್ಯೆ; ರೈಲ್ವೇ ಹಳಿಯಲ್ಲಿ ಆರೋಪಿಯ ಶವ ಪತ್ತೆ

- Advertisement -
- Advertisement -
vtv vitla

ಮಹಿಳಾ ಹಾಸ್ಟೆಲ್‌ನಲ್ಲಿ 18 ವರ್ಷದ ಯುವತಿಯನ್ನು ಹತ್ಯೆಗೈದ ಬಳಿಕ ರೈಲ್ವೇ ಹಳಿಯಲ್ಲಿ ಆರೋಪಿಯ ಶವ ಪತ್ತೆಯಾದ ಘಟನೆ ದಕ್ಷಿಣ ಮುಂಬೈನ ಚರ್ಚ್ ಗೇಟ್ ಪ್ರದೇಶದಲ್ಲಿ ನಡೆದಿದೆ.

ಕೊಲೆಯಾದ ಯುವತಿ ಬಾಂದ್ರಾದ ಉಪನಗರದ ಸರ್ಕಾರಿ ಪಾಲಿಟೆಕ್ನಿಕ್‌ನ ವಿದ್ಯಾರ್ಥಿನಿಯಾಗಿದ್ದು, ಮೆರೈನ್ ಡ್ರೈವ್‌ನ ಮಹಿಳಾ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಆಕೆಯ ಕೋಣೆಗೆ ಹೊರಗಿನಿಂದ ಬೀಗ ಹಾಕಿದ್ದು, ಆಕೆ ಹೊರಬಾರದ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೀಗ ಒಡೆದು ಕೋಣೆಯೊಳಗೆ ನುಗ್ಗಿದಾಗ ದುಪ್ಪಟ್ಟ ಕುತ್ತಿಗೆಗೆ ಬಿಗಿದ ಸ್ಥಿತಿಯಲ್ಲಿ ಯುವತಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.


ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ನಂತರ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಯ ನಂತರ ಸತ್ಯಾಂಶ ಗೊತ್ತಾಗಲಿದೆ. ಶೀಘ್ರವೇ ಎಫ್‌ಐಆರ್ ದಾಖಲಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದರು. ಘಟನೆಯ ನಂತರ ಅದೇ ಹಾಸ್ಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೋರ್ವ ತಲೆಮರೆಸಿಕೊಂಡಿದ್ದು, ರೈಲ್ವೆ ಹಳಿಯ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ.

ಮೆರೈನ್ ಡ್ರೈವ್‌ನ ಮಹಿಳಾ ಹಾಸ್ಟೆಲ್‌ನಲ್ಲಿ 18 ವರ್ಷದ ಯುವತಿಯನ್ನು ಹತ್ಯೆಗೈದ ಆರೋಪದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ರೈಲ್ವೆ ಹಳಿ ಬಳಿ ಶವವನ್ನು ಪತ್ತೆ ಮಾಡಿದ್ದಾರೆ. ಆರೋಪಿಯನ್ನು ಅದೇ ಹಾಸ್ಟೆಲ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಪ್ರಕಾಶ್ ಕನೋಜಿಯಾ ಎಂದು ಗುರುತಿಸಲಾಗಿದೆ. ಮುಂಬೈನ ಮರೈನ್ ‌ಡ್ರೈವ್ ಪಿಎಸ್ ಆತನ ವಿರುದ್ಧ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!