Friday, May 10, 2024
spot_imgspot_img
spot_imgspot_img

ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣ: ಓರ್ವ ಬಾಲಕ ಸಾವು

- Advertisement -G L Acharya panikkar
- Advertisement -

ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ.

ಇವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದ್ದು, ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಭಾನುವಾರ ಸಾವನ್ನಪ್ಪಿದ್ದಾನೆ. ಮನೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ ಇರ್ಫಾನ್(6) ಮೃತ ಬಾಲಕ.

ವಾಂತಿ, ಭೇದಿ, ಹೊಟ್ಟೆ ನೋವಿನಿಂದ 19 ಮಕ್ಕಳು ಆಸ್ಪತ್ರೆ ಸೇರಿದ್ದರು. ಈ ಪೈಕಿ ನಾಲ್ವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಓರ್ವ ಬಾಲಕ ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಇನ್ನೂ‌ ಮೂರು ಮಕ್ಕಳು ಸದ್ಯ ಚೇತರಿಸಿಕೊಂಡಿದ್ದಾರೆ. ಘಟನೆ ಬಳಿಕ ಪಾನಿಪುರಿ ಅಂಗಡಿ‌ ಮಾಲೀಕ ಪರಾರಿ ಆಗಿದ್ದಾನೆ. ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!