Friday, June 5, 2026
spot_imgspot_img
spot_imgspot_img

ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥ; ನಾಲ್ವರು ಗಂಭೀರ..!

- Advertisement -
- Advertisement -

ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ.

ಈ ಮಕ್ಕಳು ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಉಪವಾಸ ಇದ್ದರು. ಉಪವಾಸ ಮುಗಿದ ನಂತರ ಮಸೀದಿ ಬಳಿ ಪಾನಿಪುರಿ ಸೇವಿಸಿದ್ದಾರೆ. ಬಳಿಕ ವಾಂತಿ ಭೇದಿ, ಹೊಟ್ಟೆ ನೋವಿನಿಂದ 19 ಮಕ್ಕಳು ಬಳಲಿದ್ದಾರೆ.

ಇವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿರುವ ತಹಶೀಲ್ದಾರ್ ಗುರು ಬಸವರಾಜ್ ಮತ್ತು ಜಿಪಂ ಸಿಇಓ ಸುರೇಶ್ ಹಿಟ್ನಾಳ್​ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಈ ಘಟನೆ ಬಳಿಕ ಪಾನಿಪುರಿ ಅಂಗಡಿ‌ ಮಾಲೀಕ ಪರಾರಿ ಆಗಿದ್ದಾನೆ. ಇದುವರೆಗೆ ಯಾರು ದೂರು ನೀಡಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

- Advertisement -

Related news

error: Content is protected !!