Thursday, June 18, 2026
spot_imgspot_img
spot_imgspot_img

ಕೇರಳದಲ್ಲಿ ಅಮೀಬಾ ಸೋಂಕಿನ ಅಟ್ಟಹಾಸಕ್ಕೆ 19 ಜನ ಬಲಿ: 67 ಜನರಲ್ಲಿ ಸೋಂಕು ಪತ್ತೆ..!

- Advertisement -
- Advertisement -

ಕೇರಳ: ನೆರೆ ರಾಜ್ಯ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಅಂದರೆ ನೆಗ್ಲೆರಿಯಾ ಫೊವ್ಲೆರಿ ಅಮೀಬಾ ಕಾಟ ಜೋರಾಗಿದೆ. ಈಗಾಗಲೇ ಈ ಸೋಂಕಿಗೆ 19 ಜನರು ಬಲಿ ಆಗಿದ್ದು, ಸಾವಿನ ಸಂಖ್ಯೆ ಏರಿಕೆ ಆಗುತ್ತಿದೆ. ಕೇರಳದಲ್ಲಿ ಅಮೀಬಾ ಸೋಂಕು ಕಾಣಿಸಿಕೊಂಡ ಹಿನ್ನಲೆ ಸದ್ಯ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ನೆರೆಯ ರಾಜ್ಯ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾದ ಸೋಂಕು ಜೋರಾಗಿದೆ. ಈ ಸೋಂಕು ನೆಗ್ಲಿರಿಯಾ ಫೊವ್ಲೆರಿ ಎಂಬ ಅಮೀಬಾದಿಂದ ಹರಡುತ್ತದೆ. ಈ ಸೋಂಕಿಗೆ ಕೇರಳದಲ್ಲಿ ಇಲ್ಲಿಯವರೆಗೂ 19 ಜನರು ಸಾವನ್ನಪ್ಪಿದ್ದಾರೆ. 67 ಜನರು ಸೋಂಕಿತರಾಗಿದ್ದಾರೆ. ಸಾಮಾನ್ಯವಾಗಿ ನಿಂತ ನೀರು, ಕೊಳಗಳು ಮತ್ತು ಸರೋವರಗಳಲ್ಲಿ ಈ ಅಮೀಬಾ ಬೆಳೆಯುತ್ತೆ.

ಒಂದು ವೇಳೆ ಅಂತಹ ನೀರಿನಲ್ಲಿ ಈಜಾಡಿದರೆ ಅಮೀಬಾವು ಮೂಗಿನ ಮೂಲಕ ನಮ್ಮ ಮೆದುಳನ್ನ ಹೊಕ್ಕು ನೇರವಾಗಿ ಕೇಂದ್ರ ನರವ್ಯೂಹಕ್ಜೆ ಹಾನಿಯುಂಟು ಮಾಡುತ್ತದೆ. ಕೆಲವೊಮ್ಮೆ ಸೋಂಕಿನ ಪ್ರಮಾಣ ಹೆಚ್ಚಾದರೆ ಸಾವು ಕೂಡ ಸಂಭವಿಸಲಿದೆ.

ಸೋಂಕಿನ ಲಕ್ಷಣಗಳೇನು?

ಸೋಂಕು ತಗುಲಿದ 1 ರಿಂದ 9 ದಿನಗಳಲ್ಲಿ ರೋಗ ಲಕ್ಷಣಗಳು ಅಂದರೆ ತಲೆನೋವು, ಜ್ವರ, ವಾಕರಿಕೆ ಮತ್ತು ವಾಂತಿ ಕಾಣಿಸಿಕೊಳ್ಳುತ್ತದೆ.

ಸೋಂಕಿಗೆ ಚಿಕಿತ್ಸೆ ಹಾಗೂ ಯಾವ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು?

ಕೊಳ, ಕೆರೆ ಮತ್ತು ನಿಂತಿರುವ ನೀರಿನಲ್ಲಿ ಸ್ನಾನ ಮಾಡಲು, ಈಜಲು ಹೋಗದೇ ಇರುವುದು.
ಶುದ್ಧ ನೀರಿನಲ್ಲಿ ಈಜುವಾಗಲೂ ಮೂಗಿಗೆ ಕ್ಲಿಪ್‌ಗಳನ್ನು ಬಳಸುವುದು.
ಬಾವಿ ಮತ್ತು ನೀರಿನ ಟ್ಯಾಂಕ್‌ಗಳನ್ನು ನಿಯಮಿತವಾಗಿ ಕ್ಲೋರಿನ್ ಬಳಸಿ ಸ್ವಚ್ಛಗೊಳಿಸುವುದು.
ಒಂದು ವೇಳೆ ನಿಂತ ನೀರಿನ ಸಂಪರ್ಕಕ್ಕೆ ಬಂದ ನಂತರ ಜ್ವರ ಅಥವಾ ತಲೆನೋವಿನಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು.
ಇನ್ನು ಕರ್ನಾಟಕದಲ್ಲಿ ಯಾವುದೇ ರೀತಿ ನೆಗ್ಲೆರಿಯಾ ಫೊವ್ಲೆರಿ ಸೋಂಕು ಕಾಣಿಸಿಕೊಂಡಿಲ್ಲ. ಆದರು ಕೂಡ ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗುತ್ತಿದೆ.

- Advertisement -

Related news

error: Content is protected !!