Friday, March 29, 2024
spot_imgspot_img
spot_imgspot_img

20 ಕೋಟಿ ರೂ. ಮೌಲ್ಯದ ಚಿನ್ನದ ಪಾತ್ರೆಗಳನ್ನು ಮಂತ್ರಾಲಯಕ್ಕೆ ಸಮರ್ಪಿಸಿದ ದಾನಿಗಳು

- Advertisement -G L Acharya panikkar
- Advertisement -

ರಾಯಚೂರು: ರಾಘವೇಂದ್ರ ಮಹಾಸ್ವಾಮಿಗಳು ನೆಲೆಸಿರುವ ತುಂಗಾತೀರ ಮಂತ್ರಾಲಯದಲ್ಲಿ ರಾಯರ 350ನೇ ಆರಾಧನಾ ಮಹೋತ್ಸವದ ಸಂಭ್ರಮ ನಡೆಯುತ್ತಿದೆ. ಈ ಹಿನ್ನೆಲೆ ರಾಯರ ಸನ್ನಿಧಿಯಲ್ಲಿ ದಿನಕ್ಕೊಂದು ವಿಶೇಷ ಪೂಜೆ ನಡೆಯುತ್ತಿದೆ. ಅದರಂತೆ ಇಂದು ಉತ್ತರಾಧನೆ ನಡೆಯುತ್ತಿದೆ. ಈ ಸಂಭ್ರಮವನ್ನು ಮತ್ತಷ್ಟು ಇಮ್ಮಡಿಗೊಳಿಸಲು ರಾಯರ ಬೃಂದಾವನಕ್ಕೆ ಎರಡು ಚಿನ್ನದ ಪಾತ್ರೆಯನ್ನು ಸಮರ್ಪಣೆ ಮಾಡಲಾಗಿದೆ.

ಮಠಕ್ಕೆ ದಾನಿಗಳು ನೀಡಿದ ಚಿನ್ನದಿಂದ ತಯಾರಿಸಲಾದ ಪಾತ್ರೆಗಳನ್ನು ಮಠದ ಶ್ರೀಗಳು ರಾಯರಿಗೆ ಸಮರ್ಪಣೆ ಮಾಡಿದ್ದಾರೆ. 20 ಕೋಟಿ ರೂಪಾಯಿ ಮೌಲ್ಯದ ಈ ಎರಡು ಚಿನ್ನದ ಪಾತ್ರೆಗಳನ್ನು ಪಂಚಾಮೃತ ಅಭಿಷೇಕಕ್ಕೆ ಬಳಕೆ ಮಾಡಲು ಶ್ರೀಗಳು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: ಹೊಟೇಲೊಂದರಲ್ಲಿ ಕೆಲಸಕ್ಕಿದ್ದ ವ್ಯಕ್ತಿ ಸ್ನೇಹ ಸಂಪಾದಿಸಿ ಪಂಗನಾಮ; ಲಕ್ಷಾಂತರ ಹಣ ಕಳೆದುಕೊಂಡ ಸ್ಥಳೀಯರು!

ಕಲಿಯುಗದ ಕಲ್ಪವೃಕ್ಷ ಕಾಮಧೇನು ಗುರು ರಾಘವೇಂದ್ರ ಮಹಾಸ್ವಾಮಿಗಳು ನೆಲೆಸಿರುವ ತುಂಗಾತೀರದ ಮಂತ್ರಾಲಯದಲ್ಲಿ ರಾಯರ 350ನೇ ಆರಾಧನೆ ಮಹೋತ್ಸವ ನಡೆಯುತ್ತಿದೆ. ಆಗಸ್ಟ್ 21 ರಿಂದ ಆರಂಭವಾದ ರಾಯರ ಆರಾಧನೆ ಮಹೋತ್ಸವ ಆಗಸ್ಟ್ 27ರವರೆಗೂ ನಡೆಯಲಿದೆ. ಈ ನಿಟ್ಟಿನಲ್ಲಿ ಮಂತ್ರಾಲಯಕ್ಕೆ ಜನಸಾಗರವೇ ಹರಿದು ಬರುತ್ತಿದೆ.

driving
- Advertisement -

Related news

error: Content is protected !!