Saturday, May 4, 2024
spot_imgspot_img
spot_imgspot_img

2021-22 ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರಧಾನ ಸಮಾರಂಭ

- Advertisement -G L Acharya panikkar
- Advertisement -

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಫೆ. 9 ರಂದು ಗಾಜಿನ ಮನೆ ರಾಜ ಭವನ ಬೆಂಗಳೂರಿನಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ಪೋಷಕರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ಥಾವರ್ ಚಂದ್ ಗೆಹ್ಲೋಟ್ ರವರು 2021-22 ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಪುರಸ್ಕಾರ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಬ್, ಬುಲ್ ಬುಲ್, ಸ್ಕೌಟ್ಸ್, ಗೈಡ್ಸ್ , ರೋವರ್ಸ್, ರೇಂಜರ್ಸ್ ವಿದ್ಯಾರ್ಥಿಗಳಿಗೆ ನೀಡಿ ಗೌರವಿಸಿದರು.

ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳಾದ ಯಾಷಿಕಾ, ಶ್ರೀವರ್ಣ, ದೃಶ್ಯ ಹಾಗೂ ಹಳೆ ವಿದ್ಯಾರ್ಥಿಗಳಾದ ತನ್ವಿಗೌರಿ ಮತ್ತು ಮೇಧಾ ಮತ್ತು ಸ್ಕೌಟ್ಸ್ ವಿದ್ಯಾರ್ಥಿಗಳಾದ ದೀಪಕ್ ಹಾಗೂ ಧನುಷ್ ಪ್ರಶಸ್ತಿ ಸ್ವೀಕರಿಸಿದರು. ಶಿಕ್ಷಕಿ ಜಯಶ್ರೀ ಅವರು ಜತೆಗಿದ್ದರು.

ಕಾರ್ಯಕ್ರಮದಲ್ಲಿ ಮಾನ್ಯ ರಾಜ್ಯ ಮುಖ್ಯ ಆಯುಕ್ತ ಪಿ.ಜಿ. ಆರ್ ಸಿಂಧ್ಯರವರು ಹಾಗೂ ರಾಜ್ಯ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!