Friday, May 3, 2024
spot_imgspot_img
spot_imgspot_img

2023 -24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿ ಪ್ರಕಟ; ಮೇ 29ರಿಂದ ಶಾಲೆಗಳು ಆರಂಭ

- Advertisement -G L Acharya panikkar
- Advertisement -
vtv vitla

ಬೆಂಗಳೂರು: 2023 -24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದ್ದು, ಮೇ 29 ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತರಗತಿಗಳು ಆರಂಭವಾಗಲಿವೆ.

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

2023-24ನೇ ಮೊದಲನೇ ಶೈಕ್ಷಣಿಕ ಅಧಿವೇಶನವು ಮೇ 29 ರಿಂದ ಅಕ್ಟೋಬರ್ 7 ರವರಗೆ ನಡೆಯಲಿದೆ. ಎರಡನೇ ಶೈಕ್ಷಣಿಕ ಅಧಿವೇಶನವು ಅಕ್ಟೋಬರ್ 25, 2023 ರಿಂದ ಆರಂಭವಾಗಿ ಏಪ್ರಿಲ್ 10, 2024ಕ್ಕೆ ಮುಕ್ತಾಯವಾಗಲಿದೆ.

ಇನ್ನು ಮಧ್ಯಂತರ ರಜೆ 2023ರ ಅಕ್ಟೋಬರ್ 8 ರಿಂದ ಅಕ್ಟೋಬರ್ 24 ರವರೆಗೆ ಇರಲಿದೆ. ಬೇಸಿಗೆ ರಜೆ 2024ರ ಏಪ್ರಿಲ್ 11 ರಿಂದ ಮೇ 28 ರ ವರೆಗೆ ನೀಡಲಾಗಿದೆ.

- Advertisement -

Related news

error: Content is protected !!