Friday, June 27, 2025
spot_imgspot_img
spot_imgspot_img

2023-24ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ

- Advertisement -
- Advertisement -

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2023-24ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಚೆಕ್ ಮಾಡಬಹುದು. ಕೆಲವು ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿದ್ದು, ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಕೆಇಎ ಸೂಚಿಸಿದೆ.

ರಾಜ್ಯದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ.ಬಿ. ಆರ್. ಅಂಬೇಡ್ಕರ್ , ಮಾಸ್ತಿ ವೆಂಕಟೇಶ ಅಯ್ಯಂಗರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಗಾಂಧಿತತ್ವ, ಶ್ರೀ ನಾರಾಯಣ ಗುರು, ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಗಳಿಗೆ 2023-24ನೇ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು. ಮಾ.12ರಂದು ಪ್ರವೇಶಾತಿಗೆ ಪರೀಕ್ಷೆ ನಡೆಸಲಾಗಿತ್ತು.

- Advertisement -

Related news

error: Content is protected !!