Sunday, May 19, 2024
spot_imgspot_img
spot_imgspot_img

21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಮಹಾತಾಯಿ

- Advertisement -G L Acharya panikkar
- Advertisement -

ತಾಯಿಯೊಬ್ಬಳು ತನ್ನ 21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಮಹಿಳೆಯನ್ನು ರೂಪಾಲಿ ಮೊಂಡಲ್ ಎಂದು ಗುರುತಿಸಲಾಗಿದೆ.

ಈಕೆ ಇನ್ನೊಬ್ಬ ಮಹಿಳೆಗೆ 4 ಲಕ್ಷಕ್ಕೆ ತನ್ನ ಮಗಳನ್ನು ಮಾರಾಟ ಮಾಡಿದ್ದಾಳೆ. ರೂಪಾಲಿ ಮಗು ಮಾರಾಟ ಮಾಡಿದ ವಿಚಾರದ ಸಂಬಂಧ ಆನಂದಪುರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಈ ಸಂಬಂಧ ತನಿಖೆ ನಡೆಸಿದಾಗ ಸತ್ಯ ವಿಚಾರ ಬಯಲಿಗೆ ಬಂದಿದೆ.

ತಮ್ಮ ಗಮನಕ್ಕೆ ಬರುತ್ತಿದ್ದಂತೆಯೇ ಪೊಲೀಸರು ರೂಪಾಲಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆಕೆ ಸ್ಪಷ್ಟ ಕಾರಣ ಕೊಡುವಲ್ಲಿ ಎಡವಿದ್ದಾಳೆ. ಈ ಹಿನ್ನೆಲೆಯಲ್ಲಿ ಆಕೆಯ ಮೇಲೆ ಅನುಮಾನಗೊಂಡ ಪೊಲೀಸರು ರೂಪಾಲಿಯನ್ನು ಬಂಧಿಸಿದ್ದಾರೆ. ಬಳಿಕ ತನಿಕೆಗೆ ಒಳಪಡಿಸಿದಾಗ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಈಕೆಯ ಜೊತೆ ರೂಪ ದಾಸ್ ಹಾಗೂ ಸ್ವಪ್ನಾ ಸರ್ದಾರ್ ಎಂಬ ಇನ್ನಿಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ.

ರೂಪಾಲಿ ಅವರ ಪಕ್ಕದ ಮನೆಯವರಾದ ಪ್ರತಿಮಾ ಭುವಿನ್ಯಾ ಅವರ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ.

Insta: glacharyajewellers
Fb: glacharya

- Advertisement -

Related news

error: Content is protected !!