Thursday, June 25, 2026
spot_imgspot_img
spot_imgspot_img

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್‌ಡಿಪಿಎಸ್ ಪ್ರಕರಣದ ಆರೋಪಿ ಬಂಧನ

- Advertisement -
- Advertisement -

ಮಂಗಳೂರು, ಜೂನ್ 25: ಇ & ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ದಾಖಲಾಗಿದ್ದ ಎನ್‌ಡಿಪಿಎಸ್ (NDPS) ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ತೆಕ್ಕಿಲ್ ನಿವಾಸಿ ಮೊಹಮ್ಮದ್ ರಫೀಕ್ (ತಂದೆ: ಲೇ. ಇಬ್ರಾಹಿಂ) ವಿರುದ್ಧ ಇ & ಎನ್ ಅಪರಾಧ ಪೊಲೀಸ್ ಠಾಣೆ ಅ.ಕ್ರ. 03/2021ರಲ್ಲಿ NDPS ಕಾಯ್ದೆಯ ಸೆಕ್ಷನ್ 8(C) ಹಾಗೂ 20(b)(ii)(B) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ವಿಚಾರಣೆಯ ವೇಳೆ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧ ವಾರಂಟ್ ಜಾರಿಗೊಳಿಸಿತ್ತು.

ಸೈಬರ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಜೂನ್ 24ರಂದು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದು, ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Related news

error: Content is protected !!