
ವಿಟ್ಲ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ವಾಹನಗಳಿಂದ ಐದು ಬ್ಯಾಟರಿಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯಿಂದ ಕಳವಾದ ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ.


2026ರ ಮೇ 14ರಂದು ರಾತ್ರಿ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 68/2026, ಕಲಂ 303(2) ಬಿಎನ್‌ಎಸ್-2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ವೇಳೆ ಕೇರಳದ ಕಾಸರಗೋಡು ನಿವಾಸಿ ಅಬ್ದುಲ್ ಮಜಿದ್ (33) ಎಂಬಾತನನ್ನು ಆರೋಪಿಯಾಗಿ ಗುರುತಿಸಲಾಗಿದೆ.

ಈತ ಈಗಾಗಲೇ ವಿಟ್ಲ ಪೊಲೀಸ್ ಠಾಣೆಯ ವಿವಿಧ ಬ್ಯಾಟರಿ ಕಳವು ಪ್ರಕರಣಗಳಾದ ಅ.ಕ್ರ. 38/2025, 39/2026, 41/2026, 123/2026 ಹಾಗೂ 126/2026 ಪ್ರಕರಣಗಳಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ.ಜುಲೈ 20ರಂದು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದಾಗ, ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಮೂರು ವಾಹನಗಳಿಂದ ಕಳವು ಮಾಡಿದ್ದ ಐದು ಬ್ಯಾಟರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಪ್ರಕರಣದ ಕುರಿತು ಸುಳ್ಯ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.








