Wednesday, September 16, 2026
spot_imgspot_img
spot_imgspot_img

ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

- Advertisement -
- Advertisement -

ಬಂಟ್ವಾಳ: ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಮಂಗಳೂರು ಬಜಾಲ್-ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ಬಂಧಿತ ಆರೋಪಿ.ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ವಿವಿಧ ಐಪಿಸಿ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿ ವಿದೇಶದಲ್ಲಿದ್ದನು.

ಸೆ.15ರಂದು ವಿದೇಶದಿಂದ ಮಂಗಳೂರಿಗೆ ಮರಳುತ್ತಿದ್ದ ವೇಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.

ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆ.29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!