- Advertisement -
- Advertisement -

ಕೊಣಾಜೆ: ಪಿಕಪ್ ವಾಹನವೊಂದು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಜೆ ಬೋಳಿಯಾರ್ ಸಮೀಪದ ಕುರ್ನಾಡು ಪೆಟ್ರೋಲ್ ಪಂಪ್ ಬಳಿ ನಡೆದಿದೆ.ಮೃತರನ್ನು ಕಿನ್ಯ ಅರೆಬಿನಗರದ ಮಹಮ್ಮದ್ ಅರ್ಫಾಝ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡ ಸಹಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಿಕಪ್ ಢಿಕ್ಕಿಯ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ದ್ವಿಚಕ್ರ ವಾಹನ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.

ಬಳಿಕ ಪಿಕಪ್ ಕೂಡ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬ ಮುರಿದುಬಿದ್ದಿದೆ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

- Advertisement -








