Tuesday, July 21, 2026
spot_imgspot_img
spot_imgspot_img

ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: 24 ಗಂಟೆಯೊಳಗೆ ಆರೋಪಿ ಬಂಧನ

- Advertisement -
- Advertisement -

ಮಂಗಳೂರು: ನಗರದ ಮೇರಿಹಿಲ್ ಬಾಂದೋಟ್ಟು ಪ್ರದೇಶದ ಮನೆಯಲ್ಲಿ ನಡೆದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಮಂಗಳೂರು ಗ್ರಾಮಾಂತರ ಪೊಲೀಸರು 24 ಗಂಟೆಯೊಳಗೆ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಮನೆಯ ಹಿಂಭಾಗದ ಕೊಠಡಿಯ ಛಾವಣಿ ಬದಲಾವಣೆ ಹಾಗೂ ಹಾಲ್‌ನಲ್ಲಿ ಫಾಲ್ಸ್ ಸೀಲಿಂಗ್ ಕಾಮಗಾರಿ ಜುಲೈ 6ರಂದು ನಡೆಯುತ್ತಿತ್ತು. ಈ ವೇಳೆ ಮನೆಯ ಟೇಬಲ್ ಡ್ರಾಯರ್‌ನಲ್ಲಿದ್ದ ಸಣ್ಣ ಪರ್ಸ್‌ನೊಳಗೆ ಇರಿಸಿದ್ದ 20 ಗ್ರಾಂ ತೂಕದ ಚಿನ್ನದ ಕಡಗ, 17 ಗ್ರಾಂ ತೂಕದ ಚಿನ್ನದ ಸರ, 8 ಗ್ರಾಂ ಮತ್ತು 4 ಗ್ರಾಂ ತೂಕದ ಎರಡು ಚಿನ್ನದ ಉಂಗುರಗಳು ಹಾಗೂ ಸೊನಾಟಾ ಕಂಪನಿಯ ಗೋಲ್ಡ್ ಕೋಟೆಡ್ ಕೈಗಡಿಯಾರ ಸೇರಿದಂತೆ ಒಟ್ಟು 49 ಗ್ರಾಂ ಚಿನ್ನಾಭರಣ ಕಳವಾಗಿತ್ತು. ಕಳವಾದ ಸೊತ್ತಿನ ಮೌಲ್ಯ ಸುಮಾರು ₹6.37 ಲಕ್ಷ ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 68/2026ರಡಿ ಬಿಎನ್‌ಎಸ್ ಕಲಂ 305 ಅನ್ವಯ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ವೇಳೆ ಮನೆ ಕಾಮಗಾರಿಗೆ ಬಂದಿದ್ದ ಕಾರ್ಮಿಕರನ್ನು ವಿಚಾರಣೆ ನಡೆಸಿದಾಗ, ಜಹೀರುದ್ದೀನ್ (24), ತಂದೆ ನಿರಾಜುದ್ದೀನ್, ಮೂಲ ನಿವಾಸಿ ಮುಜಾಹನಿ, ಗುಮಾರಿ, ಬಲರಾಮ್‌ಪುರ (ಉತ್ತರ ಪ್ರದೇಶ), ಪ್ರಸ್ತುತ ಅಜಿಜುದ್ದೀನ್ ರಸ್ತೆ, ಬಂದರು, ಮಂಗಳೂರು ನಿವಾಸಿಯಾಗಿರುವ ಆರೋಪಿ ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.ಆರೋಪಿಯಿಂದ ಕಳವಾಗಿದ್ದ 49 ಗ್ರಾಂ ಚಿನ್ನಾಭರಣ ಹಾಗೂ ಗೋಲ್ಡ್ ಕೋಟೆಡ್ ಕೈಗಡಿಯಾರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಡಿ.ಆರ್. ಮಂಜಪ್ಪ, ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ಡಿ. ಹಾಗೂ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!