- Advertisement -
- Advertisement -


ಮಂಗಳೂರು: ಮುಲ್ಕಿ ಕೊಲ್ನಾಡು ಬಳಿ ಪ್ರವಾಸಿ ಮಿನಿ ಬಸ್ ಶಾಲಾ ಬಸ್ಸಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಹಾಗೂ ಶಾಲಾ ಬಸ್ ಚಾಲಕ ಗಾಯಗೊಂಡ ಘಟನೆ ಅ.23ರಂದು ಸಂಜೆ ನಡೆದಿದೆ.ಮುಲ್ಕಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬೆಂಗಳೂರಿನ SRS ಪ್ರವಾಸಿ ಮಿನಿ ಬಸ್, ಕೊಲ್ನಾಡಿನ ಸುಂದರರಾಮ್ ಶೆಟ್ಟಿ ಸಭಾಂಗಣದ ಬಳಿ ನಿಂತಿದ್ದ ರಯಾನ್ ಇಂಟರ್‌ನ್ಯಾಷನಲ್ ಶಾಲೆಯ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಶಾಲಾ ಬಸ್ ಸಮೀಪದ ಚರಂಡಿಗೆ ಬಿದ್ದಿದೆ.

ಘಟನೆಯಲ್ಲಿ ಶಾಲಾ ಬಸ್ಸಿನಲ್ಲಿದ್ದ 13 ವಿದ್ಯಾರ್ಥಿಗಳು ಹಾಗೂ ಚಾಲಕ ದೇವದಾಸ್ ಅವರಿಗೆ ಸಾಮಾನ್ಯ ಗಾಯಗಳಾಗಿದ್ದು, ಗಾಯಾಳುಗಳು ಮುಕ್ಕದ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಬಂಧ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಈ ಸಂಬಂಧ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
- Advertisement -








