Wednesday, July 22, 2026
spot_imgspot_img
spot_imgspot_img

ಪುತ್ತೂರು: ಭಾಸ್ಕರ ಆಚಾರ್ಯ ಹೃದಯಾಘಾತದಿಂದ ನಿಧನ

- Advertisement -
- Advertisement -

ಪುತ್ತೂರು: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.ಮೂಲತಃ ನಿಡ್ಪಳ್ಳಿ ನಿವಾಸಿಯಾಗಿದ್ದು, ಪ್ರಸ್ತುತ ಪುತ್ತೂರು ನೆಲ್ಲಿಕಟ್ಟೆ ಸಮೀಪ ಬಾಡಿಗೆ ಮನೆಯಲ್ಲಿ ವಾಸವಿದ್ದ ಭಾಸ್ಕರ್ ಆಚಾರ್ಯ (39) ಮೃತಪಟ್ಟವರು.

ಇಂದು ಮುಂಜಾನೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕುಟುಂಬಸ್ಥರು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ನೀಡಿದರೂ ಅವರು ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಭಾಸ್ಕರ್ ಆಚಾರ್ಯ ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಬಂಧು-ಬಳಗ ಹಾಗೂ ಸ್ನೇಹಿತರಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ

- Advertisement -

Related news

error: Content is protected !!