- Advertisement -
- Advertisement -
ವಿಟ್ಲ: ಬಕ್ರೀದ್ ಹಬ್ಬದ ಪ್ರಯುಕ್ತ ವಿಟ್ಲ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು , ಸರ್ವ ಧರ್ಮದ ಮುಖಂಡರನ್ನು ಕರೆದು ಸಭೆ ನಡೆಸಲಾಯಿತು.
ಹಬ್ಬದ ಪ್ರಾರ್ಥನೆ ಮುಗಿದ ಬಳಿಕ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸುತ್ತಾಟಕ್ಕೆ ತೆರಳುವ ಹಿನ್ನೆಲೆ, ಅಪ್ರಾಪ್ತರ ಕೈಗೆ ವಾಹನ ಸಿಗದಂತೆ ಪೋಷಕರು ಎಚ್ಚರ ವಹಿಸಬೇಕು ಎಂದು ಸೂಚಿಸಲಾಗಿದೆ.





ಪ್ರಾರ್ಥನೆ ಸಮಯದಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವ ಸಾಧ್ಯತೆ ಇರುವುದರಿಂದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಎದುರಾಗಬಹುದು. ಈ ಹಿನ್ನೆಲೆ ವಾಹನ ಸವಾರರು ರಸ್ತೆ ಸಂಚಾರ ಹಾಗೂ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ. ಹಬ್ಬದ ಆಚರಣೆ ಶಾಂತಿ, ಸುವ್ಯವಸ್ಥೆ ಮತ್ತು ಸುರಕ್ಷಿತ ವಾತಾವರಣದಲ್ಲಿ ನಡೆಯಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಕೋರಲಾಗಿದೆ. ಪೊಲೀಸ್ ನಿರೀಕ್ಷಕ ಪ್ರಕಾಶ್ ದೇವಾಡಿಗ ಮತ್ತು ಪಿಎಸ್‌ಐ ರಾಮಕೃಷ್ಣ ಇವರು ಸಭೆಯ ನೇತೃತ್ವ ವಹಿಸಿದರು.
- Advertisement -








