Tuesday, September 8, 2026
spot_imgspot_img
spot_imgspot_img

ಬಾಲವಿಕಾಸದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ

- Advertisement -
- Advertisement -

ವಿಟ್ಲ : ಪೆರಾಜೆ- ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಸಾಮಾಜಿಕ ಅರಣ್ಯ ವಿಭಾಗ ಮಂಗಳೂರು ಹಾಗೂ ಸಾಮಾಜಿಕ ಅರಣ್ಯ ವಲಯ, ಬಂಟ್ವಾಳ ಇದರ ಆಶ್ರಯದಲ್ಲಿ ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಜೂನ್ 5ರಂದು ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

“ಪ್ರಕೃತಿಯಿಂದ ಸ್ಪೂರ್ತಿ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ ” ಎಂಬ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಮಂಗಳೂರು ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸತೀಶ್ ಎ ವಿ ಯವರು ಶಾಲಾ ವಿದ್ಯಾರ್ಥಿಗಳಿಗೆ ಗಿಡಗಳನ್ನು ಹಸ್ತಾಂತರಿಸಿ, ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಕಾಳಜಿಯ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಬಂಟ್ವಾಳ ವಲಯ ಅರಣ್ಯಾಧಿಕಾರಿ ಸತೀಶ್ ಲೂಕ ರವರು ಮಾತನಾಡಿ ವಿಶ್ವ ಪರಿಸರ ದಿನಾಚರಣೆಯ ಇತಿಹಾಸ ಹಾಗೂ ಮಹತ್ವದ ಬಗ್ಗೆ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಾಲವಿಕಾಸ ಸಂಸ್ಥೆಯ ಮುಖ್ಯಶಿಕ್ಷಕಿ ಸುಪ್ರಿಯಾ ದೇವರಮಜಲು ಸಂದರ್ಭೋಚಿತ ಮಾತುಗಳನ್ನಾಡಿದರು.

ಈ ಕಾರ್ಯಕ್ರಮದಲ್ಲಿ ಬಂಟ್ವಾಳ ಉಪ ಅರಣ್ಯಾಧಿಕಾರಿ ಪ್ರೀತಂ ಎಸ್, ಬಂಟ್ವಾಳ ಉಪವಲಯ ಅರಣ್ಯಾಧಿಕಾರಿ ಕೃಷ್ಣ ಜೋಗಿ, ಬಾಲವಿಕಾಸ ಸಂಸ್ಥೆಯ ನರ್ಸರಿ ವಿಭಾಗದ ಶೈಕ್ಷಣಿಕ ಸಲಹೆಗಾರರಾದ ಫಿಲೋಮಿನಾ ಐಡಾ ಲೋಬೋ, ಸಂಸ್ಥೆಯ ಶಿಕ್ಷಕ – ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದ ಈ ಕಾರ್ಯಕ್ರಮಕ್ಕೆ ಅತಿಥಿಗಳನ್ನು ಸಂಸ್ಥೆಯ ಉಪ ಮುಖ್ಯಶಿಕ್ಷಕರಾದ ದಿನಕರ ಪೂಜಾರಿ ಶಾಲು ಹಾಕಿ ಸ್ವಾಗತಿಸಿದರು. ಈ ಕಾರ್ಯಕ್ರಮವನ್ನು ಸಂಸ್ಥೆಯ ವಿಜ್ಞಾನ ಶಿಕ್ಷಕಿ ಶ್ರೀಮತಿ ಅಶ್ವಿನಿ ನಿರೂಪಿಸಿ, ವಂದಿಸಿದರು.

- Advertisement -

Related news

error: Content is protected !!