- Advertisement -
- Advertisement -



ಬಂಟ್ವಾಳ: ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಯಾವುದೇ ಪೂರ್ವಾನುಮತಿ ಪಡೆಯದೆ ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಟೋಲ್ ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11:40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- Advertisement -








