Saturday, June 20, 2026
spot_imgspot_img
spot_imgspot_img

ಜೂ.10ರಿಂದ ದ.ಕ.ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ

- Advertisement -
- Advertisement -

ಮಂಗಳೂರು : ಮಂಗಳೂರು ನಗರ ಸಹಿತ ದ.ಕ.ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿತ್ತು. ಅಲ್ಲದೆ ಹವಾಮಾನದಲ್ಲಿ ಏರುಪೇರು ಕಂಡುಬಂದಿದ್ದು, ಹಲವೆಡೆ ಬಿಟ್ಟು ಬಿಟ್ಟು ಮಳೆಯಾಗಿದೆ. ಸಂಜೆ ವೇಳೆಗೆ ಬೆಳ್ತಂಗಡಿ, ಸುಳ್ಯ ಮತ್ತು ಪುತ್ತೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಮಂಗಳೂರು, ಉಳ್ಳಾಲ, ಬಂಟ್ವಾಳ, ಮುಲ್ಕಿ ತಾಲೂಕಿನ ಕೆಲವೆಡೆ ಸಾಧಾರಣ ಮಳೆಯಾದ ಬಗ್ಗೆ ವರದಿಯಾಗಿದೆ.

ರವಿವಾರ ಬೆಳಗ್ಗಿನಿಂದ ಸೋಮವಾರ ಬೆಳಗ್ಗಿನವರೆಗೆ ಜಿಲ್ಲೆಯಲ್ಲಿ ಸರಾಸರಿ 10.5 ಮಿಮೀ ಮಳೆ ದಾಖಲಾಗಿದೆ. ಬೆಳ್ತಂಗಡಿಯಲ್ಲಿ 9.4 ಮಿಮೀ, ಬಂಟ್ವಾಳದಲ್ಲಿ 7.8 ಮಿಮೀ, ಮಂಗಳೂರು 4.3 ಮಿಮೀ, ಪುತ್ತೂರು 11.3 ಮಿಮೀ, ಸುಳ್ಯ 5.3 ಮಿಮೀ, ಮೂಡುಬಿದಿರೆ 2.3 ಮಿಮೀ, ಕಡಬ 27.3 ಮಿಮಿ, ಮೂಲ್ಕಿ 4.1ಮಿಮಿ, ಉಳ್ಳಾಲದಲ್ಲಿ 10.4 ಮಿಮೀ ಮಳೆಯಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಜೂ.10ರಿಂದ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಳ್ಳುವ ಸಾಧ್ಯತೆಯಿದೆ. ಜೂ.12ರವರೆಗೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

- Advertisement -

Related news

error: Content is protected !!