Tuesday, June 9, 2026
spot_imgspot_img
spot_imgspot_img

ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 26 ನಕ್ಸಲರು ಹತ್ಯೆ; ಓರ್ವ ಯೋಧ ಹುತಾತ್ಮ

- Advertisement -
- Advertisement -

ರಾಯ್ಪರ್: ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಅಬುಜ್ಮದ್ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 26 ನಕ್ಸಲರು ಹತ್ಯೆಗೀಡಾಗಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಗೃಹ ಸಚಿವ ವಿಜಯ್ ಶರ್ಮಾ ಮಾಹಿತಿ ನೀಡಿದ್ದಾರೆ.

ಏ.21 ರಿಂದ ಮೇ 11 ರ ನಡುವೆ ಛತ್ತೀಸ್‌ಗಢ ಹಾಗೂ ತೆಲಂಗಾಣ ಗಡಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ರಾಜ್ಯ ಪೊಲೀಸರ ಜಂಟಿ ಪಡೆಗಳು ನಡೆಸಿದ್ದ ಕಾರ್ಯಾಚರಣೆಯಲ್ಲಿ 31 ನಕ್ಸಲರನ್ನು ಹತ್ಯೆ ಮಾಡಲಾಗಿತ್ತು. ಕಾರ್ಯಾಚರಣೆಯಲ್ಲಿ ಒಟ್ಟು 214 ನಕ್ಸಲ್ ಅಡಗುತಾಣಗಳನ್ನು ಧ್ವಂಸಗೊಳಿಸಲಾಗಿತ್ತು.

ಈ ಕಾರ್ಯಾಚರಣೆಯಲ್ಲಿ ಒಟ್ಟು 450 ಐಇಡಿಗಳು, 818 ಬಿಜಿಎಲ್ ಶೆಲ್‌ಗಳು, 899 ಬಂಡಲ್ ಕೋಡೆಕ್ಸ್, ಡಿಟೋನೇಟರ್‌ಗಳು ಮತ್ತು ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದಲ್ಲದೆ, ಸುಮಾರು 12 ಟನ್ ಆಹಾರ ಸಾಮಾಗ್ರಿಯನ್ನು ವಶಕ್ಕೆ ಪಡೆಯಲಾಗಿದೆ.

- Advertisement -

Related news

error: Content is protected !!