Monday, July 20, 2026
spot_imgspot_img
spot_imgspot_img

ವಿಟ್ಲ : ಪೆರಿಯಾಲ್ತಡ್ಕದಲ್ಲಿ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಇಬ್ಬರ ಬಂಧನ, ಕೋಳಿಗಳು-ನಗದು ವಶ!

- Advertisement -
- Advertisement -

ವಿಟ್ಲ: ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಯುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ಪುಣಚ ಗ್ರಾಮದ ಪೆರಿಯಾಲ್ತಡ್ಕದಲ್ಲಿ ನಡೆದಿದೆ.ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ, ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡುತ್ತಿರುವುದು ಪತ್ತೆಯಾಯಿತು.

ದಾಳಿಯ ವೇಳೆ ಬಂಟ್ವಾಳ ತಾಲೂಕಿನ ಪುಣಚ ನಿವಾಸಿಗಳಾದ ದಿವಾಕರ ಪೂಜಾರಿ (46) ಹಾಗೂ ಯಶ್ವಂತ್ (34) ಅವರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಸ್ಥಳದಲ್ಲಿದ್ದ ನಾಲ್ಕು ಅಂಕದ ಕೋಳಿಗಳು, ₹4,145 ನಗದು, ಕೋಳಿ ಅಂಕಕ್ಕೆ ಬಳಸುವ ಕತ್ತಿಗಳು (ಬಾಳು) ಹಾಗೂ ಇತರೆ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ, ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ

- Advertisement -

Related news

error: Content is protected !!