Friday, June 5, 2026
spot_imgspot_img
spot_imgspot_img

ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ 3 AK-47, 2 ಪಿಸ್ತೂಲ್‌ ಹಾಗೂ ಹೆಚ್ಚಿನ ಪ್ರಮಾಣದ ಮದ್ದುಗುಂಡುಗಳು ಪತ್ತೆ!

- Advertisement -
- Advertisement -

ಜೈಪುರ್: ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ 3 AK-47, 2 ಪಿಸ್ತೂಲ್‌ ಹಾಗೂ ಹೆಚ್ಚಿನ ಪ್ರಮಾಣದ ಮದ್ದುಗುಂಡುಗಳು ಪತ್ತೆಯಾಗಿದ್ದು, ಪಂಜಾಬ್‌ನ ಪಠಾಣ್‌ಕೋಟ್ ಪೊಲೀಸರು‌ ವಶಪಡಿಸಿಕೊಂಡಿದ್ದಾರೆ.

ಇಲ್ಲಿನ ನರೋತ್ ಜೈಮಲ್ ಸಿಂಗ್ ಗಡಿ ಪ್ರದೇಶದಲ್ಲಿ ಪಂಜಾಬ್‌ನ ಪಠಾಣ್‌ಕೋಟ್ ಪೊಲೀಸರು ಹಾಗೂ ಕೇಂದ್ರ ಗುಪ್ತಚರ ಅಧಿಕಾರಿಗಳು ಶೋಧ ನಡೆಸಿದ್ದು, ಈ ವೇಳೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಪತ್ತೆಯಾಗಿವೆ. ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ 3 ಎಕೆ -47 ರೈಫಲ್‌ಗಳು, 5 ಮ್ಯಾಗಜೀನ್‌ಗಳು, ಟರ್ಕ್‌ ಮತ್ತು ಚೈನಾ ನಿರ್ಮಿತ 2 ಪಿಸ್ತೂಲ್‌ಗಳು, 98 ಸಜೀವ ಗುಂಡುಗಳು ಸೇರಿವೆ. ರಾಜ್ಯದಲ್ಲಿ ಶಾಂತಿ ಕದಡಲು ಪಾಕಿಸ್ತಾನದಿಂದ ಈ ಶಸ್ತ್ರಾಸ್ತ್ರಗಳನ್ನು ಕಳುಹಿಸಲಾಗಿದೆ ಎಂದು ಶಂಕಿಸಲಾಗಿದೆ. ಗುಪ್ತಚರ ಮಾಹಿತಿಯ ಪ್ರಕಾರ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್ ಸರ್ವಿಸ್ ಇಂಟೆಲಿಜೆನ್ಸ್ ಬೆಂಬಲದೊಂದಿಗೆ ಕೆಲಸ ಮಾಡುತ್ತಿರುವ ಉಗ್ರರು ಇವನ್ನು ಕಳಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.

- Advertisement -

Related news

error: Content is protected !!