Saturday, June 20, 2026
spot_imgspot_img
spot_imgspot_img

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದುರಂತ; ಕುಸಿದುಬಿದ್ದ 3 ಅಂತಸ್ತಿನ ಕಟ್ಟಡ!

- Advertisement -
- Advertisement -

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಮನೆ ಕುಸಿದಿದೆ. ಮನೆ ಬೀಳುವ ಭೀಕರ ದೃಶ್ಯ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಮನೆಯಲ್ಲಿ 20ಕ್ಕೂ ಹೆಚ್ಚು ಜನರು ವಾಸವಿದ್ದರು ಎಂದು ತಿಳಿದುಬಂದಿದೆ.

ಮೆಟ್ರೋ‌ ಕಾಮಗಾರಿ ಮಾಡುತ್ತಿದ್ದ ಕಾರ್ಮಿಕರು ಈ ಕಟ್ಟಡದಲ್ಲಿ ವಾಸವಾಗಿದ್ದರು. ಹಳೇ ಕಟ್ಟಡ ಕುಸಿತದಿಂದ ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗಿದೆ. ಕಟ್ಟಡ ಕುಸಿದು ಬೀಳುವ ಮಾಹಿತಿ ಮೊದಲೇ ಇದ್ದ ಕಾರಣ ಕಾರ್ಮಿಕರನ್ನು ಅಗ್ನಿಶಾಮಕ ಸಿಬ್ಬಂದಿ ತೆರವುಗೊಳಿಸಿದ್ದರು. ಹೀಗಾಗಿ ಮೆಟ್ರೋ ಕಾರ್ಮಿಕರ ತೆರವಿನಿಂದ ಭಾರಿ ಅನಾಹುತ ತಪ್ಪಿದೆ. ಅವಶೇಷಗಳಡಿಯಲ್ಲಿ ಹಲವರು ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಆದರೆ ಇದುವರೆಗೆ ಯಾವುದೇ ಪ್ರಾಣಹಾನಿಯಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

- Advertisement -

Related news

error: Content is protected !!