Wednesday, April 24, 2024
spot_imgspot_img
spot_imgspot_img

ಮಹಾರಾಷ್ಟ್ರದಿಂದ ನಾಡ ಪಿಸ್ತೂಲು ತಂದು ಮಾರಾಟ; ಮೂವರ ಬಂಧನ

- Advertisement -G L Acharya panikkar
- Advertisement -

ಬೆಂಗಳೂರು: ಮಹಾರಾಷ್ಟ್ರದಿಂದ ನಾಡ ಪಿಸ್ತೂಲು ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಮೂವರು ರೌಡಿ ಶೀಟರ್‌ಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಮೂರು ನಾಡ ಪಿಸ್ತೂಲು ಹಾಗೂ 24 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಹೆಗ್ಗಡೆ ನಗರದ ನಿವಾಸಿಗಳಾದ ಫಯಾಜ್ ಉಲ್ಲಾ, ಮಹಮದ್ ಆಲಿ, ಸಯ್ಯದ್ ಸಿರಾಜ್ ಅಹಮದ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಫಯಾಜ್ ವುಲ್ಲಾ ವಿರುದ್ಧ ಈಗಾಗಲೇ ಆರು ಪ್ರಕರಣ ದಾಖಲಾಗಿವೆ. ಕೆ.ಆರ್.ಮಾರ್ಕೆಟ್, ಬಾಗಲೂರು ಠಾಣೆ ಪೊಲೀಸರಿಂದಲೂ ಈತ ಬಂಧನಕ್ಕೆ ಒಳಗಾಗಿದ್ದ. ಈ ವೇಳೆಯೂ ಈತನಿಂದ 12 ನಾಡ ಪಿಸ್ತೂಲು ವಶಪಡಿಸಿಕೊಳ್ಳಲಾಗಿತ್ತು.

ಮತ್ತೊಬ್ಬ ಆರೋಪಿ ಮಹಮದ್ ಆಲಿ ಶಿವಾಜಿನಗರ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದು, ಈತನ ಹಿಂದೆ ಈವರೆಗೂ ನಾಲ್ಕು ಪ್ರಕರಣ ದಾಖಲಾಗಿವೆ. ಮಾದಕ ವಸ್ತು ಜಾಲ ಪ್ರಕರಣದಲ್ಲಿ ಕೊತ್ತನೂರು ಪೊಲೀಸರು ನಾಲ್ಕು ವರ್ಷದ ಹಿಂದೆ ಬಂಧಿಸಿದ್ದರು. ಮತ್ತೊಬ್ಬ ಆರೋಪಿ ಸಯ್ಯದ್ ಸಿರಾಜ್ ಅಹಮದ್ ಗಂಗಾನಗರದ ನಿವಾಸಿಯಾಗಿದ್ದು, ಈತನ ವಿರುದ್ಧವೂ ಅಕ್ರಮ ಪಿಸ್ತೂಲು ಡೀಲಿಂಗ್ ಸಂಬಂಧ ಕೇಸು ದಾಖಲಾಗಿದೆ. ಮೂವರು ಆರೋಪಿಗಳು ಮಹಾರಾಷ್ಟ್ರದ ಶಿರಡಿಯ ಕೊಪ್ಪರ್ ಗಾವ್‌ನಲ್ಲಿ ನಾಡ ಪಿಸ್ತೂಲು ಖರೀದಿಸಿ ತಮ್ಮ ಶೋಕಿಗಾಗಿ ಹಾಗೂ ಆತ್ಮ ರಕ್ಷಣೆಗಾಗಿ ವಶದಲ್ಲಿಟ್ಟುಕೊಂಡಿದ್ದರು ಎಂದು ಆರೋಪಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!