Saturday, June 13, 2026
spot_imgspot_img
spot_imgspot_img

ಮೆಲ್ಕಾರ್ ಫ್ಲೈಓವರ್ ಬಳಿ ಎಂಡಿಎಂಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ

- Advertisement -
- Advertisement -

ಬಂಟ್ವಾಳ, ಜೂ. 5: ಮೆಲ್ಕಾರ್ ಫ್ಲೈಓವರ್ ಸಮೀಪ ವಾಹನ ತಪಾಸಣೆ ವೇಳೆ ಪೊಲೀಸರು ಎಂಡಿಎಂಎ ಮಾದಕ ವಸ್ತು ಸಾಗಾಟ ಜಾಲವನ್ನು ಪತ್ತೆಹಚ್ಚಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಜೂನ್ 4ರಂದು ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ನೇತೃತ್ವದ ತಂಡ ಮೆಲ್ಕಾರ್ ಫ್ಲೈಓವರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಾರನ್ನು ತಡೆದು ಪರಿಶೀಲನೆ ನಡೆಸಿತು. ಈ ವೇಳೆ ಕಾರಿನಲ್ಲಿದ್ದ ಚಾಲಕ ಹಾಗೂ ಇಬ್ಬರು ಪ್ರಯಾಣಿಕರ ಬಳಿ ಮಾದಕ ವಸ್ತು ಸೇವನೆಗೆ ಬಳಸುವ ಸಾಧನ ಪತ್ತೆಯಾಯಿತು.ವಿಚಾರಣೆ ವೇಳೆ ಆರೋಪಿಗಳು ಬಂಟ್ವಾಳ ಪುದು ನಿವಾಸಿ ಎ. ಜುಬೈರ್ (39), ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಿ. ಮೂಡ ನಿವಾಸಿ ಬಿ.ಎಂ. ರಶೀದ್ ಅಲಿಯಾಸ್ ಮಾರಿಮುತ್ತು ಎಂದು ಗುರುತಿಸಲ್ಪಟ್ಟಿದ್ದಾರೆ.

ತಪಾಸಣೆಯ ವೇಳೆ ಆರೋಪಿಗಳ ಬಳಿಯಿಂದ ಹಾಗೂ ಕಾರಿನೊಳಗಿಂದ ಒಟ್ಟು 76 ಗ್ರಾಂ 40 ಮಿಲಿಗ್ರಾಂ ಎಂಡಿಎಂಎ ಮಾದಕ ದ್ರವ್ಯ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ₹7.64 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಹೆಚ್ಚಿನ ಲಾಭಕ್ಕಾಗಿ ಮಾದಕ ವಸ್ತುವನ್ನು ಮಾರಾಟ ಉದ್ದೇಶದಿಂದ ಸಾಗಿಸುತ್ತಿದ್ದುದಾಗಿ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಡಿಎಂಎ, ಮಾದಕ ವಸ್ತು ಸೇವನೆಗೆ ಬಳಸುವ ಸಾಧನ, ಮೂರು ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕೆಎ-19 ಎಂಆರ್-1997 ಸಂಖ್ಯೆಯ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!