- Advertisement -
- Advertisement -

ಬೆಳ್ತಂಗಡಿ, ಜೂ. 5: ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿ ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಜೂನ್ 4ರಂದು ಮಧ್ಯಾಹ್ನ ವೇಳೆ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯ ಪೋಷಕರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೋಷಕರು ಮೃತದೇಹವನ್ನು ಗುರುತಿಸಿದ್ದಾರೆ.ಪೋಷಕರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್. ಸಂಖ್ಯೆ 33/2026ರಂತೆ ಪ್ರಕರಣ ದಾಖಲಾಗಿದ್ದು, ಕಲಂ 194 ಬಿ.ಎನ್.ಎಸ್.ಎಸ್ ಅಡಿಯಲ್ಲಿ ತನಿಖೆ ಮುಂದುವರಿದಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
- Advertisement -








